ಚಳ್ಳಕೆರೆ : ಗ್ರಾಮ ಪಂಚಾಯತಿಗಳಲ್ಲಿ ಆಗಿರುವಂತ ಅಕ್ರಮ ಹಣ ವರ್ಗವಾವಣೆ ಭ್ರಷ್ಟಾಚಾರದ ಬಗ್ಗೆ ಜಿಲ್ಲಾ ಪಂಚಾಯತನಲ್ಲಿ ತನಿಖೆ ಮಾಡುವಲ್ಲಿ ಕಾಲ ವಿಳಂಬ ಮಾಡುತ್ತಿರುವುದರಿಂದ ಸರಕಾರದ ಹಣ ದುರುಪಯೋಗ ಹಾಗುತ್ತಿದೆ ಆದ್ದರಿಂದ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.
ಅವರು ತಾಲೂಕು ಪಂಚಾಯತಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

