ಕೇಂದ್ರ ಬಿಜೆಪಿ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ತನಿಖೆಯ ಹೆಸರಿನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ನಡೆಸಿದ ಬೃಹತ್ ಪ್ರತಿಭಟನೆ ನಡೆಸಿದರು
ಪ್ರತಿಭಟನೆಯಲ್ಲಿ ಮುಖಂಡರೊಂದಿಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರು ಭಾಗವಹಿಸಿದರು.
ಕೇಂದ್ರ ಸರ್ಕಾರ ಇಡಿ ವಿಭಾಗವನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರ ಮೇಲೆ ಗದಾಪ್ರಹಾರ ಮಾಡುತ್ತಿದ್ದು, ದ್ವೇಷದ ರಾಜಕಾರಣ ಮಾಡುತ್ತಿರುವುದನ್ನು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು
ಮಾಜಿ ಸಚಿವರಾದ ಉಮಾಶ್ರೀ, ಕೆಪಿಸಿಸಿ ಉಪಾಧ್ಯಕ್ಷರಾದ ಕೆ.ಎನ್.ರಾಜಣ್ಣ, AICC ಕಾರ್ಯದರ್ಶಿಗಳಾದ ವೀಕ್ಷಕರಾದ ಶ್ರೀ ಮಯೂರ್ ಜಯ ಕುಮಾರ್ ಶ್ರೀ ಬಿ ಎನ್ ಚಂದ್ರಪ್ಪ ಕೆಪಿಸಿಸಿ ಉಪಾಧ್ಯಕ್ಷರು , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್ ಪೀರ್ ಕಾರ್ಯಧ್ಯಕ್ಷರಾದ ಹಾಲೇಶ್ ಮತ್ತು ಪದಾಧಿಕಾರಿಗಳು ಮತ್ತು ಮಾಜಿ ಶಾಸಕರಾದ ಗೋವಿಂದಪ್ಪ ಉಮಾಪತಿ
ಸೇರಿದಂತೆ ನೂರಾರು ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.