ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಅಖಂಡ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಡೆದ ಪ್ರತಿಭಟನಾ ಸ್ಥಳಕ್ಕೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಭೇಟಿ ನೀಡಿ ಮನವಿ ಸ್ವೀಕರಿಸಿದರು.
ಅಖಂಡ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಚಳ್ಳಕೆರೆ ಘಟಕದ ಸಂಯುಕ್ತ ಆಶ್ರಯದಲ್ಲಿ ಚಳ್ಳಕೆರೆ ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆದ ರೈತರ ಬೃಹತ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಹಸಿರು ಸೇನೆ ರಾಜ್ಯ ಉಪಾಧ್ಯಕ್ಷರಾದ ರೆಡ್ಡಿಹಳ್ಳಿ ವೀರಣ್ಣ, ತಾಲ್ಲೂಕು ಅಧ್ಯಕ್ಷರಾದ ದೇವರಹಳ್ಳಿ ರಾಜಣ್ಣ, ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ಕೆ.ಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ಹೆಚ್.ಪ್ರಕಾಶ್, ಮುಖಂಡರಾದ ಸೈಯದ್, ತಿಪ್ಪೇಸ್ವಾಮಿ, ಶಿವಲಿಂಗಪ್ಪ, ಮುಖಂಡರು, ಕಾರ್ಯಕರ್ತರು, ಹಾಗೂ ಸಾರ್ವಜನಿಕರು ಮತ್ತು ರೈತ ಸಂಘದ ಪದಾಧಿಕಾರಿಗಳು, ರೈತರು ಉಪಸ್ಥಿತರಿದ್ದರು.

