ಚಳ್ಳಕೆರೆ :
ಬೆಸ್ಕಾಂ ನಿರ್ಲಕ್ಷದಿಂದ ರೈತರ ಸಂಕಷ್ಟಕ್ಕೆ ಸಿಲುಕುವಂತಾಗಿದೆ, ಟಿಸಿ ಕೆಟ್ಟುಹೊದ ಸಂಧರ್ಭದಲ್ಲಿ ತಿಂಗಳಾನುಗಟ್ಟಲೆ ಕಾಯಬೇಕಾದಂತ ಪರಿಸ್ಥಿತಿ ಬಂದಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಬೆಸ್ಕಾಂ ಎಇ ಮಮತಾ ರವರಿಗೆ ಮನವಿ ಸಲ್ಲಿಸಿ ಮಾತನಾಡಿದ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ರೈತರು ಸಾಲ ಸೋಲ ಮಾಡಿ ಇಟ್ಟ ಬೆಳೆಗಳು ಸಂಪೂರ್ಣವಾಗಿ ಒಣಗುವ ಸ್ಥಿತಿಯಲ್ಲಿದೆ, ಇನ್ನು ಬೆಸ್ಕಾಂ ಇಲಾಖೆ ಅಧಿಕಾರಿಗಳು ಮೌನ ವಹಿಸಿದ್ದು ರೈತರ ಕಣ್ಣೀರಿಗೆ ಬೆಲೆ ಇಲ್ಲದಂತಾಗಿದೆ ಆದ್ದರಿಂದ ಈ ಕೂಡಲೇ ಬೆಸ್ಕಾಂ ಅಧಿಕಾರಿಗಳು ಟಿಸಿ ಸುಟ್ಟು ಹೋದ ಸಂದರ್ಭದಲ್ಲಿ ಅತಿ ತುರ್ತಾಗಿ ಸರಿಪಡಿಸಬೇಕೆಂದು ಮನವಿ ಮಾಡಿಕೊಂಡರು.

About The Author

Namma Challakere Local News
error: Content is protected !!