ನ.30ಕ್ಕೆ ನಾಯಕನಹಟ್ಟಿ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಜಿಲ್ಲಾಧ್ಯಕ್ಷ ಸತೀಶ್.

ನಾಯಕನಹಟ್ಟಿ:: ಪ್ರತಿಯೊಬ್ಬರೂ ಕನ್ನಡವನ್ನ ಉಳಿಸಿಕೊಳ್ಳಲು ಕೈ ಜೋಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಸತೀಶ್ ಹೇಳಿದರು.

ಮಂಗಳವಾರ ಪಟ್ಟಣದ ಪರಿವೀಕ್ಷಣ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ವತಿಯಿಂದ ಗುರುತಿನ ಚೀಟಿ ವಿತರಣೆ ಹಾಗೂ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಸಸಿಗೆ ನೀರಿರುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು. ಈ ಪುಣ್ಯಕ್ಷೇತ್ರದಲ್ಲಿ ನವಂಬರ್ 30ರಂದು ಕನ್ನಡ ರಾಜ್ಯೋತ್ಸವವನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಬೇಕು ಪ್ರತಿಭಾವಂತ ಗುರುತಿನ ಚೀಟಿ ಪಡೆದ ಪ್ರತಿಯೊಬ್ಬ ಪದಾಧಿಕಾರಿಗಳು ಕನ್ನಡಕ್ಕೆ ಹೆಚ್ಚಿನ ಮಹತ್ವವನ್ನು ನೀಡಿ ಕನ್ನಡವನ್ನು ಉಳಿಸಿ ಬೆಳೆಸಲು ಪ್ರೇರಣೆಯಾಗಬೇಕು ಎಂದರು.

ಪ್ರಾಸ್ತವಿಕವಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಬಳೇಶ್ ಯಾದವ್ ಮಾತನಾಡಿದರು. ನವಂಬರ್ ತಿಂಗಳು ಕನ್ನಡಿಗರಿಗೆ ನಾಡ ಹಬ್ಬವಾಗಿದೆ ನಾಡಿನ ಪ್ರತಿ ಮೂಲೆ ಮೂಲೆಗಳಲ್ಲಿ ಕನ್ನಡ ಹಬ್ಬವನ್ನು ಆಚರಣೆ ಮಾಡುತ್ತಾರೆ ಕನ್ನಡವನ್ನು ಉಳಿಸಿ ಬೆಳೆಸಲು ಮತ್ತು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡುವುದು ಕನ್ನಡಪರ ಸಂಘಟನೆಗಳು ಎಂದರು.

ತಾಲ್ಲೂಕು ಅಧ್ಯಕ್ಷ ಪಿ. ಮುತ್ತಯ್ಯ ಜಾಗನೂರಹಟ್ಟಿ ಮಾತನಾಡಿದರು. ಕಳೆದ ವರ್ಷಕ್ಕಿಂತ ಈ ಭಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಅಧ್ಯಕ್ಷ ರೇಣುಕಾ ರಾಜಣ್ಣ, ಜಿಲ್ಲಾ ಉಪಾಧ್ಯಕ್ಷ ಅನಿಲ್ ಕುಮಾರ್, ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಮಾರುತಿ, ನಾಯಕನಹಟ್ಟಿ ಹೋಬಳಿ ಘಟಕ ಅಧ್ಯಕ್ಷ ಕೆ.ಜಿ. ಮಂಜುನಾಥ್, ತಾಲೂಕು ನಗರ ಘಟಕ ಮಹಿಳಾ ಅಧ್ಯಕ್ಷ ಅನುಸೂಯಮ್ಮ, ಉಪಾಧ್ಯಕ್ಷ ಕೆ.ಪಿ. ನಾಗರಾಜ್,
ಗೌರವಾಧ್ಯಕ್ಷ ಸಿ.ಎಸ್. ರಾಘವೇಂದ್ರ, ನಗರ ಘಟಕ ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, ಮಹಿಳಾ ಘಟಕ ಅಧ್ಯಕ್ಷ ತಿಪ್ಪಮ್ಮ ಚಿನ್ನ ಮಲ್ಲಯ್ಯ, ತಾಲೂಕು ಯುವ ಘಟಕ ಅಧ್ಯಕ್ಷ ಜಯಣ್ಣ, ಹೋಬಳಿ ಘಟಕ ಪ್ರಧಾನ ಕಾರ್ಯದರ್ಶಿ ಬಿ. ಶಿವಮೂರ್ತಿ, ಸೇರಿದಂತೆ ಪದಾಧಿಕಾರಿಗಳು ಇದ್ದರು.

About The Author

Namma Challakere Local News
error: Content is protected !!