ಚಳ್ಳಕೆರೆ :
ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ
ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಛಲವಾದಿ ಮಹಾ ಸಭಾ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಚಳ್ಳಕೆರೆ ವತಿಯಿಂದ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಛಲವಾದಿ ಗುರುಪೀಠದ ಶ್ರೀ ಶ್ರೀ ಶ್ರೀ ಬಸವನಾಗಿದೇವ ಮಹಾಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ನಡೆದ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಪೌರಾಯುಕ್ತ ರಾದ ಜಗ್ಗಾರೆಡ್ಡಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಶಶಿಧರ, ಡಿ.ವೈ.ಎಸ್.ಪಿ. ಸತ್ಯನಾರಾಯಣ, ಛಲವಾದಿ ಮಹಾಸಭಾದ ರಾಜ್ಯಾಧ್ಯಕರಾದ ಶ್ರೀಮತಿ ವಾಣಿ ಶಿವರಾಮ್, ಕ್ಷೇತ್ರ ಶಿಕ್ಷಣಾಧಿಕಾರಿ ಗಳಾದ ಸುರೇಶ್, ಜಿಲ್ಲಾ ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ರಂಗಸ್ವಾಮಿ, ಮಾಜಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ತಾಲ್ಲೂಕು ಛಲವಾದಿ ಮಹಾಸಭಾದ ಅಧ್ಯಕ್ಷರಾದ ರಾಮಕೃಷ್ಣಪ್ಪ, ಉಪಾಧ್ಯಕ್ಷರಾದ ಕುಶ , ಮುಖಂಡರಾದ ಸಿಟಿ ಶ್ರೀನಿವಾಸ, ನಿಜಲಿಂಗಪ್ಪ, ಓಂಕಾರ ಮೂರ್ತಿ, ರವೀಂದ್ರ, ಪರಮೇಶ್ವರಪ್ಪ, ಜಯರಾಮಪ್ಪ, ಜಯವೀರಾಚಾರಿ, ಮಲ್ಲಿಕಾರ್ಜುನ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಛಲವಾದಿ ಮಹಾಸಭಾದ ಸದಸ್ಯರುಗಳು, ಛಲವಾದಿ ಜನಾಂಗದವರು, ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!