ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದ ಶ್ರೀ ಗೌರಿ ದೇವಿ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮುಖಂಡರಾದ ಯರಬಾಲಪ್ಪ, ವೆಂಕಟೇಶ್, ಆನಂದ, ಮಲ್ಲಿಕಾರ್ಜುನ, ಗುಂಡಣ್ಣ, ಶಿವಣ್ಣ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

