ಬಿಹಾರದಲ್ಲಿ ಕಾಂಗ್ರೆಸ್ ಸೋಲಿಗೆ ಸುಳ್ಳು ಆಶ್ವಾಸನೆಗೆ ಕಾರಣ ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ.
ನಾಯಕನಹಟ್ಟಿ:: ಕರ್ನಾಟಕದಲ್ಲಿ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವುದು ಗ್ಯಾರಂಟಿ ಎಂದು ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ ಭವಿಷ್ಯ ನುಡಿದರು.
ಶುಕ್ರವಾರ ನಾಯಕನಹಟ್ಟಿ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದವರು ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಷ್ಟು ದಿನಗಳ ಕಳೆದರೂ ರಾಜ್ಯದಲ್ಲಿ ರಸ್ತೆ ಗುಂಡುಗಳನ್ನು ಮುಚ್ಚಲು ಆಗುತ್ತಿಲ್ಲ ಅಭಿವೃದ್ಧಿ ಮಾಡುವ ನೆಪದಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಸರ್ಕಾರ ಪ್ರತಿ ತಿಂಗಳು ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿ ಹಣವನ್ನು ಹಾಕುತ್ತೇವೆ ಅಂತ ಹೇಳಿ ಸಿದ್ದರಾಮಯ್ಯ ಬೊಬ್ಬೆ ಹೊಡೆಯುತ್ತಿದ್ದಾರೆ ಇಂದು ಬಿಹಾರದಲ್ಲಿ ನಡೆದಿರುವ ಫಲಿತಾಂಶಕ್ಕೆ ಕಾಂಗ್ರೆಸ್ ಸರ್ಕಾರದ ಸುಳ್ಳು ಭರವಸೆಗಳೇ ಸೋಲಿಗೆ ಕಾರಣ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು

