ಚಳ್ಳಕೆರೆ : ಭಾರತವನ್ನು ಸಾರ್ವಭೌಮ, ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಸತ್ತಾತ್ಮಕ ಗಣತಂತ್ರ ದೇಶ ಎಂದು ಸಂವಿಧಾನದಲ್ಲಿ ಘೋಷಿಸಲಾಗಿದೆ. ಇಲ್ಲಿರುವ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಒದಗಿಸಲಾಗಿದೆ ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹೇಳಿದರು.

ಅವರು ನಗರದ ತಾಲೂಕು ಕಛೇರಿಯ ಮುಂಭಾಗದ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ನಗರಸಭೆ ಚಳ್ಳಕೆರೆ ವತಿಯಿಂದ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಡೆದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂವಿಧಾನ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು,

ಭಾರತದ ಸಂವಿಧಾನವನ್ನು ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಸಂವಿಧಾನವು ಪ್ರತಿ ಅಂಗದ ಅಧಿಕಾರದ ವ್ಯಾಖ್ಯೆಯನ್ನು ನೀಡುವುದಲ್ಲದೆ ಅವುಗಳ ಜವಾಬ್ದಾರಿಯನ್ನೂ ಖಚಿತಗೊಳಿಸುತ್ತದೆ
ನವೆಂಬರ್ 26 – ಪ್ರತೀ ವರ್ಷ ಈ ದಿನದಂದು ಭಾರತದಲ್ಲಿ ಸಂವಿಧಾನ ದಿನ ಎಂದು ಆಚರಿಸಲಾಗುತ್ತದೆ ಎಂದರು.

ದಲಿತ ಸಂಘರ್ಷ ಸಮಿತಿ ‌ಸಂಚಾಲಕ ಟಿ.ವಿಜಯ್ ಕುಮಾರ್ ಮಾತನಾಡಿ,
ಭಾರತದ ಸಂವಿಧಾನವನ್ನು ಬರೆಯಲು ಭಾರತದ ಸಂವಿಧಾನ ಸಭೆಯನ್ನು ಆಯ್ಕೆ ಮಾಡಲಾಯಿತು. 1947 ರಲ್ಲಿ ಭಾರತವು ಬ್ರಿಟಿಷ್ ಸರ್ಕಾರದಿಂದ ಸ್ವಾತಂತ್ರ್ಯವನ್ನು ಪಡೆದ ನಂತರ, ಸಂವಿಧಾನ ಸಭೆಯ ಸದಸ್ಯರು ರಾಷ್ಟ್ರದ ಮೊದಲ ಸಂಸತ್ತಾಗಿ ಸೇವೆ ಸಲ್ಲಿಸಿದರು ಎಂದರು.

ತಹಶಿಲ್ದಾರ್ ರೇಹಾನ್ ಪಾಷ ಮಾತನಾಡಿ,
ಸರ್ಕಾರ ಸಂವಿಧಾನದ ಮೂಲಕ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳ ಅಧಿಕಾರದ ಮೂಲಕ, ಪ್ರಜೆಗಳ ಹಕ್ಕು ಮತ್ತು ಕರ್ತವ್ಯಗಳನ್ನ ನಿರ್ದಿಷ್ಟಪಡಿಸುತ್ತದೆ. ಎಲ್ಲಾ ಕಾನೂನಿಗಿಂತ ಸಂವಿಧಾನವೇ ಮಿಗಿಲು. ಹೀಗಾಗಿ, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕಾನೂನು ರೂಪಿಸಲು ಸಾಧ್ಯವಿಲ್ಲ ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಪೌರಾಯುಕ್ತ ರಾದ ಜಗ್ಗಾರೆಡ್ಡಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಶಶಿಧರ, ಕ್ಷೇತ್ರ ಶಿಕ್ಷಣಾಧಿಕಾರಿ ಗಳಾದ ಸುರೇಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ದೇವ್ಲಾನಾಯ್ಕ್, ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಮಾಜಿ ನಗರಸಭೆ ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ಮಲ್ಲಿಕಾರ್ಜುನ, ಕವಿತಾ ಬೋರಯ್ಯ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರಾದ ಸಮರ್ಥರಾಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಮುಖಂಡರಾದ ವೀರಭದ್ರ, ದೊಡ್ಡರಂಗಪ್ಪ, ರುದ್ರಮುನಿ, ಶಿವಸ್ವಾಮಿ, ದೇವರಾಜ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!