ಚಿತ್ರದುರ್ಗ: ಅಧಿಕಾರಿಗಳು ನಾಟಕ ನಿಲ್ಲಿಸಬೇಕು
ಚಿತ್ರದುರ್ಗದಲ್ಲಿ ಶುಕ್ರವಾರ ಪತ್ರಿಕಾ ಗೋಷ್ಠಿ ನಡೆಸಿದ
ಶ್ರೀರಾಮ ಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್, 35ನೇ
ವಾರ್ಡ್ನಲ್ಲಿ ಜಿಲ್ಲಾಧಿಕಾರಿಗಳ ಆದೇಶವನ್ನು ಮೀರಿ ಮಸೀದಿ
ನಿರ್ಮಿಸುತ್ತಿರುವವರ ವಿರುದ್ಧ ಕಿಡಿ ಕಾರಿದರು. ಮಸೀದಿ ನಿರ್ಮಾಣ
ನಿಲ್ಲಿಸುವ ವಿಚಾರದಲ್ಲಿ ನಡೆಯುತ್ತಿರುವ ನಾಟಕವನ್ನು ನಿಲ್ಲಿಸುವಂತೆ
ಎಚ್ಚರಿಕೆ ನೀಡಿದ ಅವರು, ಜಿಲ್ಲಾಧಿಕಾರಿಗಳ ಆದೇಶವನ್ನು
ಉಲ್ಲಂಘಿಸುವವರಿಗೆ ಬೆಲೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

