ಬೆಳೆ ಪರಿಹಾರಕ್ಕೆ ಒತ್ತಾಯ: ಚಿತ್ರದುರ್ಗದಲ್ಲಿ ಬಿಜೆಪಿ
ರೈತ ಮೋರ್ಚಾ ಪ್ರತಿಭಟನೆ
ಚಿತ್ರದುರ್ಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ
ಮೋರ್ಚಾ ಬೃಹತ್ ಪ್ರತಿಭಟನೆ ನಡೆಸಿತು. ಮಾಜಿ ಸಚಿವ ಬಿ.
ಶ್ರೀರಾಮುಲು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರೈತರಿಗೆ
ಬೆಳೆ ಪರಿಹಾರ ನೀಡುವಂತೆ ಮತ್ತು ಮೆಕ್ಕೆಜೋಳ, ಶೇಂಗಾ
ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಲಾಯಿತು. ‘ರೈತ
ವಿರೋಧಿ ಕಾಂಗ್ರೆಸ್ ಸರ್ಕಾರ’ ಎಂದು ಘೋಷಣೆ ಕೂಗಿ ಆಕ್ರೋಶ
ವ್ಯಕ್ತಪಡಿಸಲಾಯಿತು. ನೀಲಕಂಠೇಶ್ವರ ದೇವಾಲಯದಿಂದ ಡಿಸಿ
ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಗಾಂಧಿ ವೃತ್ತದಲ್ಲಿ
ಮಾನವ ಸರಪಳಿ ನಿರ್ಮಿಸಿ, ಡಿಸಿ ವೃತ್ತದಲ್ಲಿ ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರ ಅಣಕು ಶವಯಾತ್ರೆ ಮಾಡಿ ಆಕ್ರೋಶ
ವ್ಯಕ್ತಪಡಿಸಲಾಯಿತು. ಜಿಲ್ಲಾ ಬಿಜೆಪಿ ರೈತ ಮೋರ್ಚಾ,
ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆಟಿ
ಕುಮಾರ ಸ್ವಾಮಿ, ಶಾಸಕ ಎಂ.ಚಂದ್ರಪ್ಪ ಸೇರಿದಂತೆ ನೂರಕ್ಕೂ
ಹೆಚ್ಚು ಮಂದಿ ಭಾಗವಹಿಸಿದ್ದರು.

