ಚಳ್ಳಕೆರೆ: ರಸ್ತೆ ಬದಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವು
ಶುಕ್ರವಾರ ರಾತ್ರಿ ಚಳ್ಳಕೆರೆಯ ಬಾಲೇನಹಳ್ಳಿ ಬಳಿ ಬೈಕ್ ಚಾಲಕನ
ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ
ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.
ಮೃತನ ಹೆಸರು ಮತ್ತು ವಿಳಾಸ ತಿಳಿದು ಬಂದಿಲ್ಲ. ಅಪಘಾತದಲ್ಲಿ
ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಚಳ್ಳಕೆರೆ ಠಾಣೆ
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ
ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

About The Author

Namma Challakere Local News
error: Content is protected !!