ಚಳ್ಳಕೆರೆ : ಸರಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳನ್ನು ತಾಲೂಕಿನ ಜನರಿಗೆ ಸಮರ್ಪಕವಾಗಿ ತಲುಪಿಸುವ ಮೂಲಕ ಅಧಿಕಾರಿಗಳು ಶ್ರಮವಹಿಸಬೇಕು ಎಂದು ತಾಲೂಕಿನ ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಹೇಳಿದರು.

ಅವರು ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶಿಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು,

ಪಂಚ ಗ್ಯಾರಂಟಿ ಯೋಜನೆಗಳನ್ನು ಬಡ ಜನರಿಗೆ ನೀಡುವ ಮೂಲಕ ಬಡವರ ಪರ ಸರಕಾರವಾಗಿದೆ, ಇನ್ನೂ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ, ವಿದ್ಯಾಸಿರಿ, ಈಗೇ ಸರಕಾರದ ಯೋಜನೆಗಳು ಸಾರ್ವಜನಿಕರಿಗೆ ಸರಿಯಾದ ರೀತಿಯಲ್ಲಿ ತಲುಪಿಸಬೇಕು ಎಂದರು.

ಇದೇ ಸಂಧರ್ಭದಲ್ಲಿ ತಾಲೂಕು ಪಂಚಾಯತಿ ಅಧಿಕಾರಿಗಳು, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

About The Author

Namma Challakere Local News
error: Content is protected !!