“ಅಧ್ಯಯನಶೀಲತೆಯಿಂದ ಮಕ್ಕಳ ಬೌದ್ಧಿಕ ಶಕ್ತಿಯ ಹೆಚ್ಚಳ”:-ಚೇತನ್ ಕುಮಾರ್. ಚಳ್ಳಕೆರೆ:-ಮಕ್ಕಳು ಅವಧಾನ ಮತ್ತು ಅಧ್ಯಯನಶೀಲತೆಯನ್ನು ಬೆಳೆಸಿಕೊಳ್ಳುವುದರಿಂದ ಅವರ ಬೌದ್ಧಿಕ ಶಕ್ತಿ ಹೆಚ್ಚಾಗುತ್ತದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಚೇತನ್ ಕುಮಾರ್ ತಿಳಿಸಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ “ವಿವೇಕ ವಿಹಾರ ವಿದ್ಯಾರ್ಥಿ ಶಿಬಿರ”ದಲ್ಲಿ ಪಾಲ್ಗೊಂಡ ಅವರು ಸ್ವಾಮಿ ಪುರುಷೋತ್ತಮಾನಂದಜೀ ಅವರು ಬರೆದಿರುವ “ಶಕ್ತಿಶಾಲೀ ವ್ಯಕ್ತಿತ್ವ ನಿರ್ಮಾಣ” ಎಂಬ ಪುಸ್ತಕದ ಕುರಿತಾಗಿ ವಿಶೇಷ ಉಪನ್ಯಾಸ ನೀಡಿದರು. ಈ ಶಿಬಿರದ ಪ್ರಯುಕ್ತ ಮಕ್ಕಳಿಂದ ಓಂಕಾರ, ದಿವ್ಯತ್ರಯರ ಪ್ರಣಾಮಮಂತ್ರ, ಶ್ರೀರಾಮಕೃಷ್ಣರ ನಾಮಸ್ಮರಣೆ, ಸ್ವಾಮಿ ವಿವೇಕಾನಂದರ ಶಕ್ತಿಮಂತ್ರ, ಸ್ವದೇಶ ಮಂತ್ರದ ಪಠಣ ನಡೆದರೆ ವೆಂಕಟಲಕ್ಷ್ಮೀ ಮತ್ತು ಯತೀಶ್ ಎಂ ಸಿದ್ದಾಪುರ ಅವರಿಂದ ಭಜನಾ ಕಾರ್ಯಕ್ರಮ ನಡೆಯಿತು. ತರಗತಿಯಲ್ಲಿ ಹರ್ಷಿತಾ, ಯಶಸ್ವಿ,ಚರಣ್ಯ, ಸಾಯಿ ಸಮರ್ಥ್,ಲಕ್ಷ್ಮೀ, ವರ್ಷ,ಚಿರಾಣ್ಯ, ಯಶಸ್ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.

About The Author

Namma Challakere Local News
error: Content is protected !!