ಕಾಯಕ ಗ್ರಾಮ : ಉಪ್ಪರಿಗೇನಹಳ್ಳಿ
ದಿನಾಂಕ 18.12.2025 ರಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಾನ್ಯ ಯೋಜನಾ ನಿರ್ದೇಶಕರಾದ ಕೆ.ಜಯಲಕ್ಷ್ಮಿ ಜಿಲ್ಲಾ ಪಂಚಾಯತ್ ಚಿತ್ರದುರ್ಗ ರವರ ಅಧ್ಯಕ್ಷತೆಯಲ್ಲಿ ಕಾಯಕ ಗ್ರಾಮ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಪ್ರಾಥಮಿಕ ಅರೋಗ್ಯ ಕೇಂದ್ರ, OHT, RO Plant, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾಗೂ ಜೆ.ಜೆ.ಎಂ.ಯೋಜನೆಯಡಿ ಅಳವಡಿಸಿರುವ ಗೃಹ ನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ಸ್ವಚ್ಚ ಭಾರತ್ ಮಿಷನ್ (ಗ್ರಾ) ವೈಯುಕ್ತಿಕ ಗೃಹ ಶೌಚಾಲಯ ಗಳ ಬಳಕೆ, ಘನ ತ್ಯಾಜ್ಯ ನಿರ್ವಹಣೆ ಹಾಗೂ ಕಾರ್ಯಚರಣೆ ಬಗ್ಗೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ NRLM ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಸ್ವ.ಭಾ.ಮಿ.(ಗ್ರಾ) ಜಿಲ್ಲಾ MIS ಸಮಾಲೋಚಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾ.ಪಂ.ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾ.ಪಂ ಸಿಬ್ಬಂದಿ, ಸ ಸ್ವಸಹಾಯ ಸಂಘದ ಒಕ್ಕೂಟದ ಸದಸ್ಯರು ಹಾಗೂ ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳು/ಸಿಬ್ಬಂದಿ ಗಳು ಗ್ರಾಮಸ್ಥರು ಭಾಗವಹಿಸಿದ್ದರು.

