ಐದು ವರ್ಷದ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ..
ಚಳ್ಳಕೆರೆ: ಪಲ್ಸ್ ಪೋಲಿಯೊ ಅಭಿಯಾನವು ದೇಶದಾದ್ಯಂತ ಪೋಲಿಯೊ ತಡೆಗಟ್ಟುವಿಕೆಯ ಪ್ರಮುಖ ಕಾರ್ಯಕ್ರಮವಾಗಿದೆ. ಈ ಅಭಿಯಾನದ ಉದ್ದೇಶ ಎಲ್ಲ ಮಕ್ಕಳಿಗೆ, ವಿಶೇಷವಾಗಿ 5 ವರ್ಷದೊಳಗಿನ ಮಕ್ಕಳಿಗೆ, ಪೋಲಿಯೊ ಲಸಿಕೆಯನ್ನು ನೀಡಿಲಾಗುತ್ತದೆ ಆದುದರಿಂದ ಪ್ರತಿಯೊಬ್ಬರು ಐದು ವರ್ಷದ ಒಳಗಿನ ಮಗುವಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಿ ಎಂದು ತಹಶೀಲ್ದಾರ್ ರೆಹನ್ ಪಾಷಾ ಹೇಳಿದರು..
ಚಳ್ಳಕೆರೆ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ತಾಲ್ಲೂಕು ಆಡಳಿತ ಶಿಕ್ಷಣ ಇಲಾಖೆ,ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕಾ ಕುರಿತು ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿ,ಪಲ್ಸ್ ಪೋಲಿಯೊ ಅಭಿಯಾನವು ದೇಶವನ್ನು ಪೋಲಿಯೊ ಮುಕ್ತಗೊಳಿಸಲು ಮತ್ತು ಆರೋಗ್ಯಕರ ಸಮಾಜವನ್ನು ನಿರ್ಮಿಸಲು ಸಹಾಯ ಮಾಡುತ್ತದೆ.
ಆದುದರಿಂದ ಹೊಯ್ದು ವರ್ಷದ ಒಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್ ಪೋಲಿಯೋ ಹಾಕಿಸಿ ಪೋಲಿಯೋ ರೋಗದಿಂದ ಮುಕ್ತಿಗೊಳಿಸಿ ಎಂದರು..
ಟಿ.ಎಚ್ ಓ ಡಾ.ಕಾಶಿ ಮಾತನಾಡಿ.ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮವು ಸಾಮಾನ್ಯವಾಗಿ ದೇಶದಾದ್ಯಂತ ನಿರ್ದಿಷ್ಟ ದಿನಗಳಲ್ಲಿ ಆಯೋಜಿಸಲಾಗುತ್ತದೆ. 2025ರ ಡಿಸೆಂಬರ್ 21 ರಿಂದ 24 ರವರೆಗೆ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ ನಡೆಯಲಿದೆ. ಈ ಅವಧಿಯಲ್ಲಿ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ.
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬೂತ್‌ಗಳು, ಮನೆ ಬಾಗಿಲಿಗೆ ಭೇಟಿ, ಮತ್ತು ಜನನಿಬಿಡ ಸ್ಥಳಗಳಲ್ಲಿ ಲಸಿಕೆ ನೀಡಲು ವಿಶೇಷ ತಂಡಗಳನ್ನು ನೇಮಿಸಲಾಗುತ್ತದೆ. ಈ ಸಮಯದಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ 5 ವರ್ಷದ ಪ್ರತಿಯೊಂದು ಮಗುವಿಗೂ ತಪ್ಪದೆ ಲಸಿಕೆಯನ್ನು ಹಾಕಲಾಗುವುದು ಎಂದರು..
ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ನಗರದ ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವುದರ ಮೂಲಕ ಪಲ್ಸ್ ಪೋಲಿಯೋ ಜಾಗೃತಿ ಮೂಡಿಸಿದರು..
ಈ ಪಲ್ಸ್ ಪೋಲಿಯೋ ಜಾಗೃತಿ ಜಾಥದಲ್ಲಿ ಬಿ ಇ ಓ ಕೆ ಎಸ್ ಸುರೇಶ್, ಆರೋಗ್ಯ ಶಿಕ್ಷಣಾಧಿಕಾರಿ ಬಿ ತಿಪ್ಪೇಸ್ವಾಮಿ. ಮಾತನಾಡಿದರು..
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ರಾಜನಾಯ್ಕ್, ಡಾ.ಉದಯ ,ಶಿಕ್ಷಕ ಪ್ರಾಣೇಶ, ನಗರಸಭೆ ಆರೋಗ್ಯ ನಿರೀಕ್ಷಕ ಗಣೇಶ್. ಆರೋಗ್ಯ ಇಲಾಖೆಯ ಸಂಜಯ್. ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಹೆಗ್ಗೆರೆ ತಾಯಮ್ಮ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಇದ್ದರು..

