ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಹೊಸದುರ್ಗ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಚಿತ್ರದುರ್ಗ, ತಾಲ್ಲೂಕು ಆಡಳಿತ, ಪಂಚಾಯತ್, ಪುರಸಭೆ, ಹೊಸದುರ್ಗ, ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹೊಸದುರ್ಗ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾದ ಶ್ರೀ ಬಿ.ಜಿ.ಗೋವಿಂದಪ್ಪ ರವರ ಅಧ್ಯಕ್ಷತೆಯಲ್ಲಿ ನಡೆದ ಕಂದಾಯ ಗ್ರಾಮ, ಉಪಗ್ರಾಮ, ಬಗರ್ ಹುಕುಂ ಸಾಗುವಳಿ ಪತ್ರ, ದರಾಖಾಸ್ತು ಪೋಡಿ, 94C ಹಕ್ಕುಪತ್ರ, E ಪೌತಿ ಖಾತೆ, ಸಾಮಾಜಿಕ ಭದ್ರತಾ ಯೋಜನೆ ಹಕ್ಕು ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ ಸುಧಾಕರ್ ಅವರು, ಜಿಲ್ಲಾಧಿಕಾರಿಗಳಾದ ವೆಂಕಟೇಶ್, ಅಪರ ಜಿಲ್ಲಾಧಿಕಾರಿಗಳಾದ ಬಿಟಿ ಕುಮಾರಸ್ವಾಮಿ, ತಾಲ್ಲೂಕು ದಂಡಾಧಿಕಾರಿಗಳಾದ ತಿರುಪತಿ ಪಾಟೀಲ್, ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಸುನೀಲ್ ಕುಮಾರ್, ಪೊಲೀಸ್ ನಿರೀಕ್ಷಕರಾದ ರಮೇಶ್, ಜಿಲ್ಲಾ ಮಟ್ಟದ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಶ್ರೀಮತಿ ದೀಪಿಕಾ ಸತೀಶ್, ತಾಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಮಹಮ್ಮದ್ ಇಸ್ಮಾಯಿಲ್, ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ನಿರಂಜನಮೂರ್ತಿ, ಪದ್ಮನಾಭ, ಲೋಕೇಶಪ್ಪ, ಉಮೇಶ್, ಲಕ್ಷ್ಮೀದೇವಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.

