filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 46;

ಚಳ್ಳಕೆರೆ :
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ- ಬಿಂದುಗಳು
ಕರ್ನಾಟಕ ಸರ್ಕಾರವು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025
ಜಾರಿಗೊಳಿಸಲು ಮುಂದಾಗಿರುವುದು ಖಂಡನೀಯ ಎಂದು ಚಳ್ಳಕೆರೆ ಬಿಜೆಪಿ ಮಂಡಲದಿಂದ ಪ್ರತಿಭಟನೆ ನಡೆಸಿ ತಾಲೂಕು ಆಡಳಿತ ತಹಶಿಲ್ದಾರ್ ರೇಹಾನ್ ಪಾಷಗೆ ಮನವಿ ಸಲ್ಲಿಸಿದರು.

ಅವರು ನಗರದ ತಾಲೂಕು ಕಛೇರಿಯ ಮುಂಬಾಗ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿ ಮಾತನಾಡಿದರು.

ಈ ವಿಧೇಯಕವು ಭಾರತದ ಸಂವಿಧಾನಕ್ಕೆ ವಿರೋಧವಾಗಿದೆ,
ಇದು ನಾಗರೀಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ 19 (1) ಪರಿಚ್ಛೇದ, (2)
ಪರಿಚ್ಛೇದದಡಿ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಆಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು
ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳುತ್ತಿದೆ, ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ ಎಂದು ಕಿಡಿ ಕಾರಿದರು.

ಇನ್ನೂ ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು
ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ, ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ.ಇದು ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ; ಮಾತ್ರವಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ, ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ, ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ, ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ಕಾಯಿದೆ ನಮಗೆ ಬೇಕೇ, ಇದರಡಿ ಪ್ರತಿಬಂಧಕ ಕ್ರಮಗಳನ್ನು ಸಹ ಉಲ್ಲೇಖಿಸಲಾಗಿದೆ. ಪೊಲೀಸರು ಅಥವಾ ಅಧಿಕಾರಿಗಳು ಸಂಭಾವ್ಯ
ಅಪರಾಧ ಎಂದು ಭಾವಿಸಿ ಮುಂಚಿತವಾಗಿ ಕ್ರಮ ಕೈಗೊಳ್ಳಬಹುದು., ಇದರಿಂದ ಪ್ರತಿಭಟನೆಗಳು ಸಭೆಗಳು ಅಥವಾ ಸಾಮಾಜಿಕ ಚಳವಳಿಗಳನ್ನು ತಡೆಯುವ ಉದ್ದೇಶ
ಇದ್ದಂತಿದೆ., ಈ ವಿಧೇಯಕದಿಂದ ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಸುವವರು
ಹೆಚ್ಚು ತೊಂದರೆಗೆ ಸಿಲುಕುತ್ತಾರೆ ಎನ್ನಲಾಗಿದೆ.

ಇದೇ ಸಂಧರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ಸುರೇಶ್ ದಿನೇಶ್ ರೆಡ್ಡಿ,
ಚಿದಾನಂದ, ವೀರಭದ್ರಪ್ಪ, ರಾಮಾಂಜನೇಯ, ನಾಗರಾಜ್ ಶೆಟ್ಟಿ, ಕಾಂತರಾಜ್, ದಿನೇಶ್ ರೆಡ್ಡಿ, ಡಾ.ರಾಮ್ ರಾಜ್, ಕೃಷ್ಣಪ್ಪ ,ರುದ್ರಮುನಿ ಅಲ್ಪಸಂಖ್ಯಾತ ಪ್ರಧಾನ ಕಾರ್ಯದರ್ಶಿ ಬಾಬು ಚನ್ನಗನಹಳ್ಳಿ, ದುಗ್ಗವರ ರಂಗಸ್ವಾಮಿ ಒಬಿಸಿ ಘಟಕದ ಪ್ರಧಾನ ಕಾರ್ಯದರ್ಶಿ, ಸಹನಾ, ಅಂಬಿಕಾ ಜಗದಾಂಬ, ಶಾಂತಮ್ಮ, ಭಾಗ್ಯಮ್ಮ, ತಿಮ್ಮಕ್ಕ, ಶಿವ ಅನ್ನಪೂರ್ಣ ,ಲಕ್ಷ್ಮೀ ಇನ್ನಿತರರು ಪಾಲ್ಗೊಂಡಿದ್ದರು

About The Author

Namma Challakere Local News
error: Content is protected !!