ಚಳ್ಳಕೆರೆ :
ಶಿಕ್ಷಣದ ಜೊತೆಗೆ ಮಕ್ಕಳ ಭವಿಷ್ಯಕ್ಕೆ ಅಗತ್ಯವಾದ ಮಾನವೀಯ ಮೌಲ್ಯಗಳನ್ನು ನೀಡುವುದಲ್ಲದೆ ಮೌಲ್ಯಯುತವಾದ ಗುಣಗಳನ್ನು ಬೆಳೆಸಬೇಕು ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ಹೊಂಗಿರಣ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ 2025 26 ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಸಾಧಿಸುವ ಛಲ ಎಲ್ಲರಲ್ಲಿಯೂ ಆವಶ್ಯಕ. ಆದರೆ ತಮ್ಮ ಸಾಧನೆಯ ಸಮಯದಲ್ಲಿ ಸಂಕಷ್ಟದಲ್ಲಿರುವವರನ್ನು ರಕ್ಷಣೆ ಮಾಡುವುದೇ ನಿಜವಾದ ಸಾಧನೆ. ವಿದ್ಯಾರ್ಥಿಗಳು ತಮ್ಮ ತನವನ್ನು ಇನ್ನೊಬ್ಬರಲ್ಲಿ ಅಳೆದು ನೋಡಬಾರದು. ಪೋಷಕರು ತಮ್ಮ ಮಕ್ಕಳನ್ನು ಇತರ ವಿದ್ಯಾರ್ಥಿಗಳೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ, ಇದರಿಂದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಖಿನ್ನತೆಯ ಭಾವನೆ ಮೂಡಿ ಅವರ ಬೆಳವಣಿಗೆಯ ಮೇಲೆ ಪರಿಣಾಮ ಬೀಳುವ ಸಾಧ್ಯತೆಯಿದೆ ಎಂದರು.
ಸಂಸ್ಥೆಯ ಗೌರವ ಅಧ್ಯಕ್ಷ ಡಿ.ನಾಗಪ್ಪ ಮಾತನಾಡಿ,
ಮಕ್ಕಳ ಬಗ್ಗೆ ಪೋಷಕರಿಗೆ ಇರುವಷ್ಟೇ ಶಿಕ್ಷಕರಿಗೂ ಇರುತ್ತದೆ, ಮಕ್ಕಳು ಹೆಚ್ಚಿನ ಸಮಯ ಶಿಕ್ಷಕ ರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಹೇಳಿದರು.
ಹೊಂಗಿರಣ ಇಂಟರ್ನ್ಯಾಷನಲ್ ಶಾಲೆಯ ಅಧ್ಯಕ್ಷ ರಾಜೇಶ್ ಗುಪ್ತ ಮಾತನಾಡಿ,
ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳ ಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾರ್ಡ್ಯ ಹಾಗೂ ಆರೋಗ್ಯ ಹೊಂದುವಂತೆ ತಿಳಿಸಿದರು.
ಇದೇ ಸಂಧರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಯಾದ ದಯಾನಂದ ಪ್ರಹ್ಲಾದ್, ನಿರ್ದೇಶಕರಾದ ಶಿವಪ್ರಸಾದ್, ಮಧುಸೂದನ್, ಕಲ್ಪನಾ ರಾಜೇಶ್, ಬಿಆರ್ ಸಿ ಮಂಜುಬಾಬು,
ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಪೋಷಕರಾದ ಶೇಖರಪ್ಪ, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಪೋಷಕರು ಮಕ್ಕಳು ಇತರರು ಹಾಜರಿದ್ದರು.


