ಹೊಸದುರ್ಗ : ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಮತ್ತು ಅಧ್ಯಕ್ಷರುಗಳಿಗೆ ಜಯದೇವ ಕನ್ವೆನ್ಷನ್ ಹಾಲ್ನಲ್ಲಿ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟ ನಿ. ಶಿವಮೊಗ್ಗ ಇದರ ವತಿಯಿಂದ ಹೊಸ ವರ್ಷದ ಹಾಗೂ ಮಕರ ಸಂಕ್ರಾಂತಿಯ ಪ್ರಯುಕ್ತವಾಗಿ ಚಿತ್ರದುರ್ಗ ಜಿಲ್ಲೆಯ ಹಾಲು ಒಕ್ಕೂಟದ ನಿರ್ದೇಶಕರುಗಳಾದ ಜಿ.ಪಿ ರೇವಣಸಿದ್ದಪ್ಪ, ಬಿ. ಸಿ. ಸಂಜೀವ ಮೂರ್ತಿ ಹಾಗೂ ಜಿಬಿ. ಶೇಖರಪ್ಪ ಇವರಿಂದ ನೂತನ ಕ್ಯಾಲೆಂಡರ್ ಬಿಡುಗಡೆ ಹಾಗೂ ಸಂಘದ ಕಾರ್ಯದರ್ಶಿಗಳಿಗೆ ಮತ್ತು ಆಡಳಿತ ಮಂಡಳಿಯ ನಿರ್ದೇಶಕರುಗಳಿಗೆ ಸಿಹಿ ವಿತರಣಾ ಕಾರ್ಯಕ್ರಮ ಸಮಾರಂಭದಲ್ಲಿ 2024 -25 ನೇ ಸಾಲಿನಲ್ಲಿ ಲಾಭಗಳಿಸಿರುವ ಹೊಸದುರ್ಗ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ಪಾವತಿಸಬೇಕಾಗಿರುವ ಸಹಕಾರ ಶಿಕ್ಷಣ ನಿಧಿಯನ್ನು ಆಯಾ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಬಿ.ಸಿ ಸಂಜೀವ ಮೂರ್ತಿರವರಿಗೆ ನೀಡಿದರು.

ಈ ಸಂದರ್ಭದಲ್ಲಿ ಹಾಲು ಒಕ್ಕೂಟದ ನಿರ್ದೇಶಕರಾದ ಜಿ.ಪಿ ರೇವಣಸಿದ್ದಪ್ಪ ಹಾಗೂ ಜಿ.ಬಿ ಶೇಖರಪ್ಪ ಮತ್ತು ನಿವೃತ್ತ ವಿಸ್ತರಣಾಧಿಕಾರಿಗಳಾದ ಕೃಷ್ಣಪ್ಪ, ಶಿವಮೊಗ್ಗ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರು, ವಿಸ್ತರಣಾಧಿಕಾರಿಗಳು ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು ಕಾರ್ಯಕ್ರಮದ ನಂತರ ಅಚ್ಚುಕಟ್ಟಾದ ಊಟದ ವ್ಯವಸ್ಥೆಯನ್ನು ನಿರ್ದೇಶಕರುಗಳು ಏರ್ಪಡಿಸಿದ್ದರು.

About The Author

Namma Challakere Local News
error: Content is protected !!