ಚಳ್ಳಕೆರೆ :
ಬೆಳೆದು ಫಸಲಿಗೆ ಬಂದಿದ್ದ ಸುಮಾರು 15ಕ್ಕೂ ಅಧಿಕ ಅಡಿಕೆ ಮರಗಳನ್ನು ರಾತ್ರೋರಾತ್ರಿ ದುಷ್ಕರ್ಮಿಗಳು ಕಡಿದು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಹೌದು,
ಇದು ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದ ರೈತ ತಿಪ್ಪೇಸ್ವಾಮಿ ಅವರ ಜಮೀನಿನಲ್ಲಿ ನಡೆದಿರುವ ಘಟನೆ. ವರ್ಷಗಳ ಕಾಲ ಕಷ್ಟಪಟ್ಟು ಬೆಳೆಸಿದ್ದ ಅಡಿಕೆ ಮರಗಳು ಫಸಲಿಗೆ ಬಂದಿದ್ದ ಸಂದರ್ಭದಲ್ಲೇ ಗುರುವಾರ ರಾತ್ರಿ ಕಿಡಿಗೇಡಿಗಳು ದುಷ್ಕೃತ್ಯ ಎಸಗಿ ಮರಗಳನ್ನು ಕಡಿದು ಹಾಕಿದ್ದಾರೆ.
ಈ ದುಷ್ಕೃತ್ಯದಿಂದ ರೈತ ತಿಪ್ಪೇಸ್ವಾಮಿ ಅವರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಅಡಿಕೆ ಬೆಳೆ ಮೇಲೆ ಬದುಕು ಕಟ್ಟಿಕೊಂಡಿದ್ದ ರೈತ ಇದೀಗ ಕಂಗಾಲಾಗಿದ್ದಾನೆ
ಗ್ರಾಮದಲ್ಲಿ ಇಂತಹ ಕೃತ್ಯಗಳು ಹೆಚ್ಚುತ್ತಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

