ಹೊಳಲ್ಕೆರೆ ಹಾಗೂ ಚಿತ್ರದುರ್ಗದ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಮತ್ತು ಅಧ್ಯಕ್ಷರುಗಳಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟ ನಿ. ಶಿವಮೊಗ್ಗ ಇದರ ವತಿಯಿಂದ ಹೊಸ ವರ್ಷದ ಹಾಗೂ ಮಕರ ಸಂಕ್ರಾಂತಿಯ ಪ್ರಯುಕ್ತವಾಗಿ ಚಿತ್ರದುರ್ಗ ಜಿಲ್ಲೆಯ ಹಾಲು ಒಕ್ಕೂಟದ ನಿರ್ದೇಶಕರುಗಳಾದ ಜಿ.ಪಿ ರೇವಣಸಿದ್ದಪ್ಪ, ಬಿ. ಸಿ. ಸಂಜೀವ ಮೂರ್ತಿ ಹಾಗೂ ಜಿಬಿ. ಶೇಖರಪ್ಪ ಇವರಿಂದ ನೂತನ ಕ್ಯಾಲೆಂಡರ್ ಬಿಡುಗಡೆ ಹಾಗೂ ಸಂಘದ ಕಾರ್ಯದರ್ಶಿಗಳಿಗೆ ಮತ್ತು ಆಡಳಿತ ಮಂಡಳಿಯ ನಿರ್ದೇಶಕರುಗಳಿಗೆ ಸಿಹಿ ನೀಡಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ಚಿತ್ರದುರ್ಗದ ಸಹಾಯಕ ಉಪ ವ್ಯವಸ್ಥಾಪಕರು, ವಿಸ್ತರಣಾಧಿಕಾರಿಗಳು ಹಾಗೂ ಸಿ.ಸಿ.ಯ ಸಿಬ್ಬಂದಿ ವರ್ಗದವರು ಮತ್ತು ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು ಕಾರ್ಯಕ್ರಮದ ನಂತರ ಅಚ್ಚುಕಟ್ಟಾದ ಊಟದ ವ್ಯವಸ್ಥೆಯನ್ನು ಮಾನ್ಯ ನಿರ್ದೇಶಕರುಗಳು ಏರ್ಪಡಿಸಿದ್ದರು.

About The Author

Namma Challakere Local News
error: Content is protected !!