ಚಳ್ಳಕೆರೆ ಮತ್ತು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ದೀರ್ಘಾವಧಿ ಮುಖ್ಯಮಂತ್ರಿಯಾಗಿ ಮುಂದುವರೆದಿರುವ ಪ್ರಯುಕ್ತ ಸಂಭ್ರಮಾಚರಣೆಯ ಕಾರ್ಯಕ್ರಮವನ್ನುಆಚರಿಸಿದರು.

ಕರ್ನಾಟಕದಲ್ಲಿ 7ವರ್ಷ 239ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಿವಂಗತ ಶ್ರೀ ದೇವರಾಜು ಅರಸು ರವರ ದಾಖಲೆಯನ್ನು ಮುರಿದು ಕರ್ನಾಟಕ ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಮುಂದುವರೆದಿರುವ ಸಿದ್ದರಾಮಯ್ಯ ರವರಿಗೆ ಚಳ್ಳಕೆರೆ ಮತ್ತು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಂದ ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ಕೇಕ್ ಕತ್ತರಿಸಿ ಎಲ್ಲಾ ಮುಖಂಡರು, ಕಾರ್ಯಕರ್ತರು ಹಾಗುದಾರ್ವಜನಿಕರಿಗೆ ಸಿಹಿ ಹಂಚಿ ಅಭಿನಂದನಾ ಸಮಾರಂಭವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ಹಿರಿಯ ಮುಖಂಡರಾದ ಪ್ರಭುದೇವ್, ಸೈಯದ್, ತಿಪ್ಪೇಸ್ವಾಮಿ, ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಕಾಂಗ್ರೆಸ್ ಪರಿಶಿಷ್ಠ ವರ್ಗಗಳ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಸಿಟಿ ಶ್ರೀನಿವಾಸ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೀತಾಬಾಯಿ, ಜಿಲ್ಲಾ ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ರಂಗಸ್ವಾಮಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು, ಮಹಿಳಾ ಮುಖಂಡರಾದ ಭಾಗ್ಯಮ್ಮ, ಭಾಗ್ಯಲಕ್ಷ್ಮಿ, ಕವಿತಾ, ಮಂಜುಳ, ಜನರುನ್ನಿಸಾ, ಉಷಾ, ಜಬೀನಾ, ಇಂದ್ರಮ್ಮ, ಮುಖಂಡರಾದ ಕೃಷ್ಣಮೂರ್ತಿ, ಚಳ್ಳಕೆರಪ್ಪ, ಬಸವರಾಜ್, ಅನ್ವರ್ ಮಾಸ್ಟರ್, ಗಿರಿಯಪ್ಪ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!