ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಜಾತ್ರೆಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.

ಫೆಬ್ರುವರಿ 8 ಮತ್ತು 9ರ 2026ರಂದು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಯ ಪ್ರಯುಕ್ತ ಗುರುಪೀಠದ ಸಭಾಂಗದಲ್ಲಿ ಶ್ರೀ ಶ್ರೀ ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಪಾಲ್ಗೊಂಡು ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಾತ್ರಾ ಸಮಿತಿಯ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರು ಮತ್ತು ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್ ರವರು, ರಾಯಚೂರು ಲೋಕಸಭಾ ಸದಸ್ಯರಾದ ಕುಮಾರ ನಾಯಕ ರವರು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ನಾಯಕ ಸಮುದಾಯದವರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!