ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದರು.
ಎಐಸಿಸಿ ಸೂಚನೆಯ ಮೇರೆಗೆ “ನರೇಗಾ ಬಚಾವ್ ಸಂಗ್ರಾಮ್” ಆಂದೋಲನದ ಅಭಿಯಾನಕ್ಕೆ ಚಾಲನೆ ನೀಡಲು ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡು ಹೊಸ ಬಿಲ್ ನ ಪರಿಣಾಮಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿ ಈ ಸಂಗ್ರಾಮ/ಹೋರಾಟದ ಬಗ್ಗೆ ಎಲ್ಲಾ ಹಂತದ ಪದಾಧಿಕಾರಿಗಳಿಗೆ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಡಿ ಸುಧಾಕರ್ ರವರು, ಮಾನ್ಯ ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು, ಶ್ರೀ ಎನ್ ವೈ ಗೋಪಾಲಕೃಷ್ಣ ರವರು, ಮಾನ್ಯ ಶಾಸಕರು, ಶ್ರೀ ಬಿ ಜಿ ಗೋವಿಂದಪ್ಪ ರವರು, ಮಾನ್ಯ ಶಾಸಕರು, ಶ್ರೀ ಜಿ ಎಸ್ ಮಂಜುನಾಥ್ ರವರು, ಅಧ್ಯಕ್ಷರು, ಆದಿಜಾಅಂಬವ ಅಭಿವೃದ್ಧಿ ನಿಗಮ, ಶ್ರೀ ಬಿ ಯೋಗೇಶ್ ಬಾಬು ರವರು, ಅಧ್ಯಕ್ಷರು, ದ್ರಾಕ್ಷಿ ರಸಗಳ ಅಭಿವೃದ್ಧಿ ಮಂಡಳಿ, ಶ್ರೀ ಆರ್ ಶಿವಣ್ಣ ರವರು
ಅಧ್ಯಕ್ಷರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಎಂ ಕೆ ತಾಜ್ ಪೀರ್ ರವರು ಹಾಗೂ ಕಾರ್ಯಾಧ್ಯಕ್ಷರಾದ ಶ್ರೀ ಕೆ ಎಂ ಹಾಲಸ್ವಾಮಿ ರವರು, ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಶ್ರೀಮತಿ ಗೀತಾ ನಂದಿನಿಗೌಡ, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

