ಚಿತ್ರದುರ್ಗ ಜಿಲ್ಲಾ ಕಾಂಗ್ರೇಸ್ ಸಮಿತಿ ವತಿಯಿಂದ ಚಿತ್ರದುರ್ಗ ನಗರದಲ್ಲಿ ನಡೆದ ಕಾಂಗ್ರೆಸ್ ಮಹತ್ವಾಕಾಂಕ್ಷಿ ಯೋಜನೆಯಾದ ಮನರೇಗಾ ಹೆಸರಿನ ಯೋಜನೆಯನ್ನು ಬದಲಾಯಿಸಿ ಕೇಂದ್ರ ಬಿಜೆಪಿ ಸರ್ಕಾರವು ವಿಬಿ ರಾಮ್ ಜೀ ಎಂದು ಬದಲಾಯಿಸುವುದನ್ನು ಖಂಡಿಸಿ ಮನರೇಗಾ ಹೆಸರಿನ ಯೋಜನೆಯನ್ನು ಮರುನಾಮಕರಣ ಮಾಡುವಂತೆ ನಡೆದ ಪ್ರತಿಭಟನೆ, 5 ಕಿ.ಮೀ. ಪಾದಯಾತ್ರೆ ಮತ್ತು ಉಪವಾಸ ಸತ್ಯಾಗ್ರಹದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಡಿ.ಸುಧಾಕರ್,
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಮನರೇಗಾ ಬಜಾವೂ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ರವರು, ಹೊಸದುರ್ಗ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧ್ಯಕ್ಷರಾದ ಬಿಜಿ ಗೋವಿಂದಪ್ಪ ರವರು, ಮಾಜಿ ಸಂಸದರಾದ ಬಿ ಎನ್ ಚಂದ್ರಪ್ಪ ರವರು, ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ ರವರು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ನಗರಾಭಿವೃದ್ಧಿ ಅಧ್ಯಕ್ಷರಾದ ಎಂ ಕೆ ತಾಜ್ ಪೀರ್, ಗ್ಯಾರೆಂಟಿ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು, ಮುಂಚೂಣಿ ಘಟಕದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

