ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೆಳೆ ವಿಮೆ, ಪರಿಹಾರ, ಮತ್ತು ಇನ್ನಿತರೇ ಬೇಡಿಕೆಗಳ ಬಗ್ಗೆ ಮನವಿ ಪತ್ರವನ್ನು ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ರವರು, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ಹೊಸದುರ್ಗ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾದ ಬಿಜಿ ಗೋವಿಂದಪ್ಪ ಅವರು, ಜಿಲ್ಲಾಧಿಕಾರಿಗಳಾದ ವೆಂಕಟೇಶ್, ಪೊಲೀಸ್ ವರಿಷ್ಠಾಧಿಕಾರಿಗಳಾದ ರಂಜಿತ್ ಕುಮಾರ್ ಭಂಡಾರು, ಜಿಲ್ಲಾ ಮಟ್ಟದ ಅಧಿಕಾರಿಗಳು, ರೈತ ಸಂಘದ ಭೂತಯ್ಯ, ರೈತರು, ಉಪಸ್ಥಿತರಿದ್ದರು.

