ಚಳ್ಳಕೆರೆ :
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿ ಕಾರ್ಯಕ್ರಮಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ
ಚಳ್ಳಕೆರೆ ನಗರದಲ್ಲಿ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮೂರು ದಿನಗಳ ಜಾಗೃತಿ ಕಾರ್ಯಕ್ರಮಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ.ರಘುಮೂರ್ತಿ ಅವರು ಚಾಲನೆ ನೀಡಿ ಮಾತನಾಡಿದರು,
ಕಾಂಗ್ರೆಸ್ ಸರ್ಕಾರ ಕಳೆದ ಚುನಾವಣೆಯಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಡ ಕುಟುಂಬಗಳ ಅಭಿವೃದ್ಧಿಗೆ ಸಬಲೀಕರಣದತ್ತ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಅಲ್ಲದೆ
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಎರಡುವರೆ ವರ್ಷಗಳಿಂದ ಆಡಳಿತ ನಡೆಸುತ್ತಿದ್ದು, ದೀನದಲಿತರು ಹಾಗೂ ಬಡ ಕುಟುಂಬಗಳಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡುತ್ತಿದೆ ಅಲ್ಲವೇ ಇಂದಿನ ದಿನಮಾನಗಳಲ್ಲಿ ಸಾಮಾನ್ಯ ಜನರು ಪಂಚ ಗ್ಯಾರಂಟಿಗಳಿಂದ ತಮ್ಮ ಜೀವನವನ್ನು ಗ್ರಾಮಾಂತರ ಹಾಗೂ ನಗರಗಳಲ್ಲಿ ರೂಪಿಸಿಕೊಂಡಿದ್ದಾರೆ ಇದಕ್ಕೆಲ್ಲ ಕಾರಣ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿಗಳೆಂದು ಹೇಳಬಹುದು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಯೋಜನೆಯೊಂದಾದ ಮಹಿಳೆಯರ ಶಕ್ತಿ ಯೋಜನೆ ಕುರಿತು ಚಳ್ಳಕೆರೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರೊಂದಿಗೆ ಶಾಸಕ ಟಿ.ರಘುಮೂರ್ತಿ ಚರ್ಚೆ ನಡೆಸಿ
ಪಂಚ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆಗಿರುವ ಅನುಕೂಲಗಳ ಕುರಿತು ಸಾರ್ವಜನಿಕರು ಹಾಗೂ ಬಸ್ ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡರು
ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿಯ ತಾಲೂಕ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ,
ಕಾಂಗ್ರೆಸ್ ಮುಖಂಡರಾದ ಸುರೇಶ್ ಗೌಡ, ತಿಪ್ಪೇಸ್ವಾಮಿ, ಹೊಯ್ಸಳ ಗೋವಿಂದ, ವೀರಭದ್ರಯ್ಯ, ಸಿಟಿ ಸೀನಪ್ಪ, ಮಲ್ಲಿಕಾರ್ಜುನ್,
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

