ಚಳ್ಳಕೆರೆ : ಪ್ರತಿಯೊಬ್ಬ ಮನುಷ್ಯ ತನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಕಾಲ ಕಾಲಕ್ಕೆ ವೈದ್ಯರ ಸಲಹೆ ಪಡೆಯುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಅವರು ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ನಗರದ ಯಾದವ ವಿದ್ಯಾರ್ಥಿ ನಿಲಯದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಕರಿಯಣ್ಣ, ಖಜಾಂಚಿ ಮೂಡಲಗಿರಿಯಪ್ಪ, ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ವೀರೇಶ್, ಮೂಡಲಗಿರಿಯಪ್ಪ, ವೀರೇಶ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!