ನಾಳೆ ತಳಕು ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯತಿ ಕಟ್ಟಡ ಲೋಕಾರ್ಪಣೆ. ಪಿಡಿಒ ಬಿ ಓಬಣ್ಣ.
ನಾಯಕನಹಟ್ಟಿ- ಸಮೀಪದ ತಳಕು ಗ್ರಾಮದಲ್ಲಿ ಬುಧವಾರ ನೂತನ ಗ್ರಾಮ ಪಂಚಾಯತಿ ಕಟ್ಟಡ ಲೋಕಾರ್ಪಣೆ ಆಗಲಿದೆ ಎಂದು ಪಿಡಿಒ ಬಿ.ಓಬಣ್ಣ ಹೇಳಿದರು.
ಮಂಗಳವಾರ ತಳಕು ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ದಿನಾಂಕ 4./2./2026 ಬುಧವಾರ ರಂದು ತಳಕು ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಶಿಧರ್, ಸೇರಿದಂತೆ ತಳಕು ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ತಳಕು ಗ್ರಾಮಸ್ಥರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಸಾರ್ವಜನಿಕರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಿಡಿಒ ಬಿ. ಓಬಣ್ಣ ಮನವಿ ಮಾಡಿದರು.

