ಚಳ್ಳಕೆರೆ : ತಾಲ್ಲೂಕು ಮಟ್ಟದ ಆಶುಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರ ಮೆಲುಗೈ ಸಾಧನೆ
ಚಳ್ಳಕೆರೆ : ಜಿಲ್ಲಾ ಕನ್ನಡ ಜಾಗೃತಿ ಸಮಿತಿ, ಚಿತ್ರದುರ್ಗ ವತಿಯಿಂದ ಏರ್ಪಡಿಸಿದ ಚಳ್ಳಕೆರೆ ತಾಲ್ಲೂಕು ಮಟ್ಟದ ಆಶುಭಾಷಣ ಸ್ಪರ್ಧೆಯಲ್ಲಿ ಚಳ್ಳಕೆರೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅನಿತ.ಜಿ ಪ್ರಥಮ ಸ್ಥಾನ ಪಡೆದರೆ, ವಿದ್ಯಾ.ಎಂ.ಎಸ್ ದ್ವಿತೀಯ ಸ್ಥಾನ, ಸುಶ್ಮಿತ.ಎನ್ ತೃತೀಯ ಸ್ಥಾನ, ಹಾಗೂ ನಾಗವೇಣಿ ಎನ್.ಟಿ ಮತ್ತು ರಮೇಶ್.ಈ ಸಮಾಧಾನಕರ ಬಹುಮಾನ ಪಡೆದಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮತ್ತು ಜಿಲ್ಲಾ ಕನ್ನಡ ಜಾಗೃತಿ ಸಮಿತಿ, ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಚಿತ್ರದುರ್ಗ ತ.ರಾ.ಸು ರಂಗಮAದಿರದಲ್ಲಿ ನಡೆದ “ಕನ್ನಡ ನುಡಿ ನಡೆ” ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಭರಣ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಿಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಈದೇ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಹಮತ್‌ವುಲ್ಲಾ, ಸಾಹಿತಿ ಮರುಕುಂಟೆ ತಿಪ್ಪೇಸ್ವಾಮಿ, ಸಾಹಿತಿ ಕರ‍್ಲಕುಂಟೆ ತಿಪ್ಪೇಸ್ವಾಮಿ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ್, ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್.ಲಕ್ಷö್ಮಣ, ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯದರ್ಶಿ ಡಾ.ರೇಖಾ, ಸಂಯೋಜಕರಾದ ಬೆಳಗಟ್ಟ ನಾಗರಾಜ್ ಇತರರು ಉಪಸ್ಥಿತರಿದ್ದರು.
ಪುರಸ್ಕೃತ ವಿದ್ಯಾರ್ಥಿಗಳನ್ನು ಚಳ್ಳಕೆರೆ ಸರಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜಿನ ಪ್ರಾಚಾರ್ಯ ಎಂ.ರವೀಶ್ ಹಾಗೂ ಉಪನ್ಯಾಸಕ ವೃಂದ ಅಭಿನಂದಿಸಿದರು.