ಮಹಿಳಾ ಸದಸ್ಯರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ. ಮಂಜುಳಾ ಶ್ರೀಕಾಂತ್ ಸಲಹೆ
ಬೋಸೆದೇವರಹಟ್ಟಿಯಲ್ಲಿ ಸಾಮೂಹಿಕ ಸತ್ಯ ನಾರಾಯಣ ಪೂಜೆಗೆ ಚಾಲನೆ ಪಟ್ಟಣ ಪಂಚಾಯತಿ ಅಧ್ಯಕ್ಷೆ ಮಂಜುಳಾ ಶ್ರೀಕಾಂತ್.
ನಾಯಕನಹಟ್ಟಿ-: ಧರ್ಮಸ್ಥಳ ಬಡಜನರ ಬದುಕಿಗೆ ಆಶಾಕಿರಣವಾಗಿದೆ ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷೆ ಮಂಜುಳಾ ಶ್ರೀಕಾಂತ್ ತಿಳಿಸಿದರು.
ಶುಕ್ರವಾರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬೋಸೆದೇವರಹಟ್ಟಿ ಗ್ರಾಮದ ಬೋಸೆರಂಗ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ನಾಯಕನಹಟ್ಟಿ ಹಾಗೂ ಮನುಮೈನಹಟ್ಟಿ ವಲಯ ವತಿಯಿಂದ ಸಾಮೂಹಿಕ ಸತ್ಯ ನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಜೋತಿ ಬೆಳಗುವ ಮೂಲಕ ಉದ್ಘಾಟಿಸಿದರು ಚಾಲನೆ ನೀಡಿ ಮಾತನಾಡಿದರು. ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಲಕ್ಷಾಂತರ ಬಡಜನರ ಬದುಕಿಗೆ ಬೆಳಕಾಗಿದೆ ಸಂಘದಲ್ಲಿ ಸಾಲ ಪಡೆದ ಮಹಿಳಾ ಸದಸ್ಯರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಕುಟುಂಬದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಾ ಉತ್ತಮ ಬದುಕು ಕಟ್ಟಿಕೊಳ್ಳಿ ಎಂದರು.
ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಮಾತನಾಡಿದರು. ಸಮಾಜದಲ್ಲಿ ಸಮನ್ವಯತೆ ಸಾಮರಸ್ಯ ಒತ್ತಡದ ಬದುಕಿನಲ್ಲಿ ಮಾನಸಿಕ ನೆಮ್ಮದಿ ಕಾಪಾಡಲು ಸಾಮೂಹಿಕ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿ ರೇಖಲಗೆರೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಕೆ.ಟಿ.ನಾಗಭೂಷಣ್ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಜಯಂತ್ ಕುಮಾರ್, ಬೋಸೆ ರಂಗಸ್ವಾಮಿ ದೇವಸ್ಥಾನದ ಅರ್ಚಕರಾದ ಪಿ ಓ ಮಲ್ಲಿಕಾರ್ಜುನ್, ಪಟ್ಟಣ ಪಂಚಾಯತಿ ಸದಸ್ಯರಾದ ಸುನೀತಾ ಮುದಿಯಪ್ಪ, ಡಿ.ಓಬಯ್ಯ ದಾಸ್, ಮುಖಂಡ ಜಿ.ಬಿ. ಮುದಿಯಪ್ಪ, ಮಂಜುನಾಥ್, ಮಾಜಿ ಸೈನಿಕ ಬೋಸೆರಂಗಪ್ಪ,ಪಿ.ಎಂ. ಪ್ರಕಾಶ್, ವಲಯ ಮೇಲ್ವಿಚಾರಕ ಪ್ರದೀಪ್, ಸೇವಾ ಪ್ರತಿನಿಧಿಗಳು ಸಂಘದ ಸದಸ್ಯರು ಗ್ರಾಮಸ್ಥರು ಇದ್ದರು.

