ನಾಯಕನಹಟ್ಟಿ : ಶ್ರೀವೀರಭದ್ರೇಶ್ವರ ಪ್ರೌಢಶಾಲೆ ಕ್ರೀಡಾಪಟುಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಚಳ್ಳಕೆರೆ : 2022-23ನೇ ಸಾಲಿನ ಪ್ರೌಢಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ವೀರಭದ್ರೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮಸ್ಥಾನ ಪಡೆದಿದ್ದು ಹಾಗೂ ವಾಲಿಬಾಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಕಾರ್ಯದರ್ಶಿ ಎನ್ ಸತೀಶ್ ಸಂತಸ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ನಾಯಕನಹಟ್ಟಿ ಸಮೀಪದ ತೊರೆಕೋಲಮ್ಮನಹಳ್ಳಿಯಲ್ಲಿ ನಡೆದ ಕ್ರೀಡಾ ಕೂಟದಲ್ಲಿ ಹೊಬಳಿ ಮಟ್ಟದಲ್ಲಿ ಹಲವು ಶಾಲೆಗಳು ಭಾಗವಹಿಸಿದ್ದವು.
ಮುಸ್ಟಲಗುಮಿ ಶ್ರೀ ವೀರಭದ್ರೇಶ್ವರ ಪ್ರೌಢ ಶಾಲೆ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಜಯಗಳಿಸಿದ್ದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುವುದು ಸಂತಸ ತಂದಿದೆ ಎಂದು ಶ್ರೀ ವೀರಭದ್ರೇಶ್ವರ ಪ್ರೌಢಶಾಲೆಯ ಕಾರ್ಯದರ್ಶಿ ಎನ್ ಸತೀಶ್ ರವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಶ್ರೀವೀರಭದ್ರೇಶ್ವರ ಪ್ರೌಢಶಾಲೆಯ ಅಧ್ಯಕ್ಷರು ಶಾಲೆಯ ಶಿಕ್ಷಕ ಶಿಕ್ಷಕಿಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು