ಚಳ್ಳಕೆರೆ : 2022ರ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕ್ರೀಡಾಪಟುಗಳಿಗೆ ಶುಭ ಕೋರಿದರು.
ಸಾರ್ವಜನಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಚಳ್ಳಕೆರೆ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆ ಪರಶುರಾಂಪುರ, ಹೋಬಳಿಯ ಪ್ರೌಢಶಾಲೆಗಳ ಮತ್ತು ಗ್ರಾಮ ಪಂಚಾಯಿತಿ ಇವರ ಸಂಯುಕ್ತಾಶ್ರಯದಲ್ಲಿ ಪರಶುರಾಂಪುರ ವಲಯ-1ರ ಪ್ರೌಢಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟ-2022-23ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕ್ರೀಡಾಪಟುಗಳಿಗೆ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ವೆಂಕಟೇಶ್, ಸದಸ್ಯ ರುದ್ರೇಶ್, ಪ್ರಕಾಶ್, ನಾಗಭೂಷಣ, ಶ್ರೀನಿವಾಸ್, ಮುಖಂಡರಾದ ಕೇಶವಣ್ಣ, ರಂಗಸ್ವಾಮಿ, ಕುಮಾರ, ಮಂಜುಳಮ್ಮ, ಬಲ್ಲಿ, ಚನ್ನಕೇಶವ, ಬಸವರಾಜ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿಎಂ ಶಿವಕುಮಾರಸ್ವಾಮಿ, ಜಿಲ್ಲಾ ಕಿಸಾನ್ ಸಂಘದ ಅಧ್ಯಕ್ಷ ನಾಗರಾಜ್, ಮಧು ಕುಮಾರ್, ಕೃಷ್ಣಪ್ಪ ,ಮಹಾಂತೇಶ್, ಇನ್ನು ಮುಂತಾದವರು ಉಪಸ್ಥಿತರಿದ್ದರು.