ಮಕ್ಕಳ ಅಭಿವ್ಯಕ್ತ ಭಾವನೆ ಉಜ್ವಲಗೊಳಲಿ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಮಕ್ಕಳು ಮಾನಸೀಕ ಬೌದ್ಧಿಕ ಮಟ್ಟ ಇಂತಹ ಪ್ರತಿಭಾ ಕಾರಂಜಿಯಲ್ಲಿ ಪ್ರಜ್ವಲಿಸಲಿವೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.
ಅವರು ನಗರದ ಬಿಸಿನೀರು ಮುದ್ದಪ್ಪ ಪ್ರೌಢಶಾಲಾ ಆವರಣದಲ್ಲಿ 2022-23ನೇ ಸಾಲಿನ ಕಸಬಾ ಹೋಬಳಿ ಮಟ್ಟದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪಠ್ಯ ಪೂರಕ ಚಟುವಟಿಕೆಗಳಲ್ಲಿ ಒಂದು ವರ್ಷದ ಅವಧಿಯಲ್ಲಿ ಕಲಿತ ಕಲಿಕಾ ಸಾಮಾಗ್ರಿಗಳಲ್ಲಿ ವರ್ಷದ ಕೊನೆಯ ಹಂತದಲ್ಲಿ ಪಠ್ಯೆತರ ಚಟುವಟಿಕೆಗಳಲ್ಲಿ ಭಾವಗಿಸುವುದು ಅವರ ಅಭಿವ್ಯಕ್ತ ಗೊಳಿಸುವುದು ಬೌದ್ಧಿಕ ಮಟ್ಟ ಹಿಮ್ಮಡಿಗೊಳ್ಳುತ್ತದೆ ಎಂದರು.
ಈದೇ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಮಾತನಾಡಿ, ಮಕ್ಕಳಿಗೆ ಪೂರಕ ವಾತವರಣ ಕಲ್ಪಿಸಿದರೆ ಅವರ ಬೌದ್ಧಿಕ ಮಟ್ಟ ಬೆಳೆಯಲು ಸಹಕಾರಿಯಾಗುತ್ತದೆ ಎಂದರು.
ಬಿಸಿನೀರು ಮುದ್ದಪ್ಪ ಪ್ರೌಢಶಾಲಾ ಮುಖ್ಯ ಶಿಕ್ಷಕ ಮಂಜುನಾಥ್‌ರೆಡ್ಡಿ, ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜನಪ್ಪ, ಉಪಾಧ್ಯಕ್ಷೆ ಮಂಜುಳ ಆರ್ ಪ್ರಸನ್‌ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಪ್ರಕಾಶ್‌ಮೂರ್ತಿ, ತಾಲೂಕು ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಶ್ರೀನಿವಾಸ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕ ಅಧ್ಯಕ್ಷ ವೀರಭದ್ರಪ್ಪ ನಾಯಕ, ಮುಖಂಡರುಗಳಾದ ಕೃಷ್ಣಮೂರ್ತಿ, ದೊಡ್ಡರಂಗಪ್ಪ, ಮುಖಂಡರು ಕಾರ್ಯಕರ್ತರು ಮತ್ತು ಸ್ಪರ್ಧಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.