ಮಕ್ಕಳ ರಕ್ಷಣೆಗೆ ಪ್ರತಿಯೊಬ್ಬರು ಕಟಿಬದ್ಧರಾಗಿ : ತಹಶಿಲ್ದಾರ್ ಎನ್. ರಘುಮೂರ್ತಿ
ಚಳ್ಳಕೆರೆ : ಮಕ್ಕಳ ರಕ್ಷಣೆಗೆ ತಾಲೂಕು ಮಟ್ಟದ ಪ್ರತಿಯೊಬ್ಬ ಅಧಿಕಾರಿಯೂ ಕೂಡ ಕಟಿ ಬದ್ದರಾಗಬೇಕು ಎಂದು ತಹಶಿಲ್ದಾರ್ ಎನ್. ರಘುಮೂರ್ತಿ ಹೇಳಿದ್ದಾರೆ.
ಅವರು ನಗರದ ತಾಲೂಕು ಕಛೇರಿಯಲ್ಲಿ ತಾಲೂಕು ಆಡಳಿತ ತಾಲೂಕು ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚಿತ್ರ ಡಾನ್ ಬಾಸ್ಕೋ ಸಂಸ್ಥೆಯಿAದ ಆಯೋಜಿಸಿದ್ದ ಮಕ್ಕಳ ಸಂರಕ್ಷಣೆಗಾಗಿ ತಾಲೂಕು ಮಟ್ಟದ ಸಮನ್ವಯ ಸಭೆ ಮತ್ತು ತಾಲ್ಲೂಕು ಮಟ್ಟದ ವಕಾಲತ್ತು ಕಾರ್ಯಗಾರದಲ್ಲಿ ಮಾತನಾಡಿದರು.
ತಾಲೂಕು ಮಟ್ಟದ ಪ್ರತಿಯೊಬ್ಬ ಅಧಿಕಾರಿಯೂ ಮಕ್ಕಳ ರಕ್ಷಣೆಗೆ ಕಂಕಣ ಬದ್ದರಾಗಬೇಕು ಪ್ರತಿ ಶಾಲೆಯಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಮಾಡಬೇಕು ಪ್ರತಿ ಗ್ರಾಪಂ.ಮಟ್ಟದಲ್ಲಿ ಮಕ್ಕಳ ಸಹಾಯಣೆ ಸಂಖ್ಯೆ ನಮೂದಿಸಿರಬೇಕು ಜೊತೆಗೆ ಮಕ್ಕಳ ಕುಂದು ಕೊರತೆಗಳ ಸಹಾಯಕ್ಕಾಗಿ ಪ್ರತಿ ಶಾಲೆಯಲ್ಲಿ ಮಕ್ಕಳ ಪತ್ರ ಚೀಟಿ ಪೆಟ್ಟಿಗೆ ವ್ಯವಸ್ಥೆ ಮಾಡಿರಬೇಕು ಎಂದರು.
ಇನ್ನೂ ಕ್ಷೇತ್ರ ಶಿಕ್ಷಾಣಾಧಿಕಾರಿ ಕೆ.ಎಸ್ ಸುರೇಶ್ ಮಾತನಾಡಿ, ಮಕ್ಕಳ ರಕ್ಷಣೆಗೆ ನಾವೇಲ್ಲಾ ಸಿದ್ದರೆದ್ದೆವೆ ಪ್ರತಿ ಶಾಲೆಯಲ್ಲಿ ಮಕ್ಕಳ ಹಕ್ಕು ಹಾಗೂ ರಕ್ಷಣೆ ಬಗ್ಗೆ ಸಭೆ ಮಾಡುವ ಮೂಲಕ ಬಾಲ್ಯವಿವಾಹವನ್ನೂ ಸಂಪೂರ್ಣವಾಗಿ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಶಿಶು ಮತ್ತು ಮಕ್ಕಳ ಸಹಾಯಕ ಅವೃದ್ಧಿಕಾರಿ ರಾಮಾಂಜನೇಯ ಮಾತನಾಡಿ, ತಾಲೂಕಿನ 490 ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ರಕ್ಷಣೆಗೆ ಕ್ರಮವಹಿಸಿಲಾಗಿದೆ, ಜೊತೆಗೆ ಸಹಾಯವಾಣಿ ಸಂಖ್ಯೆ ಮಕ್ಕಳ ಹಕ್ಕುಗಳ ಬಗ್ಗೆ ನಿರಂತರವಾಗಿ ಅರಿವು ಮೂಡಿಸುವ ಮೂಲಕ ಜಾಗೃತಿಗೊಳಿಸಿದೆ, ಕಳೆದ ವರ್ಷಗಳಲ್ಲಿ 40ಕ್ಕೂ ಹೆಚ್ಚು ಬಾಲ್ಯವಿವಾಹ ತಡೆದು ಪ್ರಕರಣ ದಾಖಲು ಮಾಡಿದ್ದೆವು ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದರು.
ಇದೇ ಸಂಧರ್ಭದಲ್ಲಿ ಆರೋಗ್ಯ ಸಹಾಯಕ ಅಧಿಕಾರಿ ಕುದಾಪುರ ತಿಪ್ಪೇಸ್ವಾಮಿ, ಕ್ಷೇತ್ರಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಕಾರ್ಮೀಕ ಇಲಾಕೆ ಅಧಿಕಾರಿ ಕುಸುಮಾ, ಸಮಾಜ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಅಧಿಕಾರಿ ಅಶೋಕ್, ತಾಪಂ.ಮೇನಜೆರ್, ಸಂಯೋಜಕ ನೀಲಪ್ಪ, ಸಂಪನ್ಮೂಲ ವ್ಯಕ್ತಿ ಮಂಜುನಾಥ್ ಇತರು ಪಾಲ್ಗೋಂಡಿದ್ದರು.
ಪೋಟೋ ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಸಮನ್ವಯ ಸಭೆ ನಡೆಸಿದ ತಹಶೀಲ್ದಾರ್ ಎನ್.ರಘುಮೂರ್ತಿ