ಸರಕಾರದ ಯೋಜನೆಗಳು ಸಪಲ್ಯಗೊಳ್ಳಲು ಅಧಿಕಾರಿಗಳ ಪಾತ್ರ ಮುಖ್ಯ : ಇಒ.ಹೊನ್ನಯ್ಯ
ಚಳ್ಳಕೆರೆ : ಗ್ರಾಮೀಣ ಭಾಗದ ಜನರಿಗೆ ಸರಕಾರದ ಯೋಜನೆಗಳು ತಲುಪುವಂತೆ ಅಧಿಕಾರಿಗಳು ಕ್ರಮವಹಿಸಿದಾಗ ಮಾತ್ರ ಸರಕಾರದ ಆಶಯ ಈಡೇರಿದಂತಾಗುತ್ತದೆ ಎಂದು ತಾಪಂ ಇಒ ಹೊನ್ನಯ್ಯ ಹೇಳಿದರು.
ಅವರು ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಿದ್ದ ನರೇಗಾ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಬಡ ಜನರಿಗೆ ಉದ್ಯೋಗ ನೀಡುವ ಮೂಲಕ ನೊಂದವರ ಬಾಳಿಗೆ ಬೆಳಕಾಗಬೇಕು ಗ್ರಾಮೀಣ ಭಾಗದಲ್ಲಿ ಗುಳೆ ಹೊಗುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಸ್ಥಳದಲ್ಲಿ ಉದ್ಯೋಗ ನೀಡುವ ಮೂಲಕ ಆರ್ಥಿಕ ಮಟ್ಟ ಸುಧಾರಿಸಬೇಕು, ಅಧಿಕಾರಿಗಳು ಸರಕಾರದಿಂದ ಬರುವ ವಿವಿಧ ಯೋಜನೆಗಳ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಂಡು ಗ್ರಾಮಗಳಲ್ಲಿ ಮೂಲಸೌಲಭ್ಯ ಕಲ್ಪಿಸುವುದರ ಜೊತೆಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಹೇಳಿದರು.
ತಾಲೂಕು ಪಂಚಾಯಿತಿ ಸಹಾಯಕ ನಿದೇರ್ಶಕ ಸಂತೋಶ್ ಮಾತನಾಡಿ, ನರೇಗಾ ಯೋಜನೆ ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಕೈಕೆತ್ತಿಗೊಂಡು ಯಂತ್ರಗಳ ಬಳಕೆ ಮಾಡಿಕೊಳ್ಳದೆ ಕೂಲಿ ಕಾರ್ಮಿಕರಿಗೆ ಕೆಲಸ ನೀಡಿ ಗುಳೆ ಹೋಗುವುದನ್ನು ತಡೆಯಬೇಕು, ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಬಿಡುವಡೆಯಾಗುವ ಅನುದಾನ, ಸೇರಿದಂತೆ ವಿವಿಧ ಯೋಜನೆಗಳಿಂದ ಬಿಡುಗಡೆಯಾಗುವ ಅನುದಾನದಲ್ಲಿ ಕುಡಿಯುವ ನೀರು, ವಿದ್ಯುತ್ ದೀಪ, ಸೇರಿದಂತೆ ಗ್ರಾಮದ ಸ್ವಚ್ಚತೆಗೆ ಹೆಚ್ಚಿನ ಆಧ್ಯತೆ ನೀಡಬೇಕು ಎಂದರು.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಹಾಯಕ ನಿರ್ದೇಶ ಸಂಪತ್ ಕುಮಾರ್ ಸೇರಿದಂತೆ 40 ಗ್ರಾಪಂ ಪಿಡಿಒಗಳು ಉಪಸ್ಥಿತರಿದ್ದರು.
ಪೋಟೋ ಚಳ್ಳಕೆರೆ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಿದ್ದ ನರೇಗಾ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ತಾಪಂ ಇಒ ಹೊನ್ನಯ್ಯ ಮಾತನಾಡಿದರು.