ಧಾರ್ಮಿಕ ಪರಂಪರೆಯನ್ನು ಉಳಿಸುವ ಅನಿವಾರ್ಯತೆ ಇದೆ : ತಹಶೀಲ್ದಾರ್ ಎನ್.ರಘುಮೂರ್ತಿ
ಚಳ್ಳಕೆರೆ : ಭಾರತೀಯ ಸನಾತನ ಸಂಸ್ಕೃತಿ ಮತ್ತು ಪರಂಪರೆಯಲ್ಲಿ ಧಾರ್ಮಿಕ ಭಾವನೆಗಳಿಗೆ ವಿಶಿಷ್ಟವಾದ ಸ್ಥಾನಮಾನವಿದೆ ಧಾರ್ಮಿಕ ಮತ್ತು ಆಧ್ಯಾತ್ಮಿಕವಾದಂತ ಕೊಡುಗೆಯನ್ನು ಭಾರತ ವಿಶ್ವಕ್ಕೆ ಪರಿಚಯಿಸಿದೆ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.
ಅವರು ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಮಹಿಳೆಯರೊಂದಿಗೆ ಕುಂಕುಮಾರ್ಚನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಸರ್ಕಾರದ ನಿರ್ದೇಶನದಂತೆ ಚಳ್ಳಕೆರೆ ತಾಲೂಕಿನಲ್ಲಿರುವಂತ ಎ ಮತ್ತು ಬಿ ಗುಂಪಿನ ಎರಡು ದೇವಸ್ಥಾನಗಳಲ್ಲೂ ಸಾಮೂಹಿಕ ಕುಮಾರ್ಚನೆ ಹಮ್ಮಿಕೊಂಡು ಭಕ್ತಾದಿಗಳ ಭಾವನೆಗಳನ್ನು ಇಮ್ಮಡಿ ಗೊಳಿಸಲಾಗಿದೆ.
ತಾಲೂಕಿನಲ್ಲಿ ಈ ವರ್ಷ ಉತ್ತಮ ಮಳೆಯಾಗಿದ್ದು ಕಾಯಕ ಯೋಗಿ ಶ್ರೀ ತಿಪ್ಪೇರುದ್ರಸ್ವಾಮಿ ಕಟ್ಟಿಸಿರುವಂತಹ ದೊಡ್ಡಕೆರೆ ಕೋಡಿ ಬಿದ್ದಿದೆ, ಉಳಿದಂತ 24 ಕೆರೆಗಳು ಕೋಡಿ ಬಿದ್ದು ನೀರು ಹರಿಯುತ್ತಿದೆ
ಈ ಭಾಗದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ ಧಾರ್ಮಿಕ ಭಾವನೆಗಳನ್ನು ನಾವೆಲ್ಲ ಗೌರವಿಸಿ ಪೂಜಿಸಿದಾಗ ಮಾತ್ರ ಶಾಂತಿ ನೆಲೆಸುತ್ತದೆ ಮನಸ್ಸನ್ನು ಕೇಂದ್ರೀಕರಿಸುವ ಸ್ಥಳಗಳೆನಾದರೂ ಇದ್ದರೆ ಅವುಗಳು ದೇವಸ್ಥಾನಗಳಾಗಿವೆ ಇಂಥ ಒಂದು ಪವಿತ್ರ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗಿಯಾಗಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಾಣಧಿಕಾರಿ ಗಂಗಾಧರಪ್ಪ, ಬಿಜೆಪಿ ಮುಖಂಡರಾದ ಎಂವೈಡಿ.ಸ್ವಾಮಿ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಮಾಂತಣ್ಣ, ನಾಯಕನಹಟ್ಟಿ ಉಪ ತಹಸಿಲ್ದಾರ್ ಸುಧಾ, ರಾಜಸ್ವ ನಿರೀಕ್ಷಕ ಚೇತನ್ ಕುಮಾರ್ ಉಪಸ್ಥಿತರಿದ್ದರು

ಪೋಟೋ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಮಹಿಳೆಯರೊಂದಿಗೆ ಕುಂಕುಮಾರ್ಚನೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎನ್.ರಘುಮೂರ್ತಿ ಭಾಗಿಯಾಗಿದ್ದರು.

Namma Challakere Local News
error: Content is protected !!