ಎಸ್‌ಸಿ/ಎಸ್‌ಟಿ ಮೀಸಲಾತಿಗಾಗಿ ವಿವಿಧ ಪಕ್ಷದ ಶಾಸಕರ ಜೊತೆ ಶಾಸಕ ಟಿ.ರಘುಮೂರ್ತಿ ಚರ್ಚೆ
ಚಳ್ಳಕೆರೆ : ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಇಂದು ಬೆಂಗಳೂರಿನಲ್ಲಿ ವಿವಿಧೆಡೆ ನಡೆದ ಸಭೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರು ಭಾಗವಹಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸುವ ಮುನ್ನ ಗೃಹ ಕಚೇರಿ ಕೃಷ್ಣದಲ್ಲಿ ವಿರೊಧ ಪಕ್ಷದ ಸಿದ್ದರಾಮಯ್ಯ ಅವರೊಂದಿಗೆ ಮೀಸಲಾತಿ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಯು.ಟಿ.ಖಾದರ್, ಶಾಸಕ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮೀಸಲಾತಿ ಹೋರಾಟದಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ನಡೆಸುವ ಕುರಿತು ಈ ವೇಳೆ ಚರ್ಚಿಸಿ, ನಿರ್ಧರಿಸಲಾಯಿತು.
ಬಳಿಕ ಆಯೋಗದ ವರದಿ ಜಾರಿಗೊಳಿಸುವಂತೆ ಹಾಗೂ ಎಸ್‌ಸಿ, ಎಸ್‌ಟಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಶ್ರೀ ವಾಲ್ಮೀಕಿ ಪ್ರಸನ್ನಾಂದ ಸ್ವಾಮೀಜಿ ಅವರು ನಡೆಸುತ್ತಿರುವ ಧರಣಿ ಸತ್ಯಾಗ್ರಹ 240ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಅವರೊಂದಿಗೆ ಫ್ರೀಡಂ ಪಾರ್ಕ್ಗೆ ತೆರಳಿ ಅವರೊಂದಿಗೆ ಮಾತುಕತೆ ನಡೆಸಿದರು.
ನಂತರ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಭಾಗವಹಿಸಿ ಮೀಸಲಾತಿ ಬಗ್ಗೆ ಚರ್ಚಿಸಲಾಯಿತು.
ಈ ವೇಳೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಎಲ್ಲರೂ ಒಕ್ಕೊರಲಿನಿಂದ ಒತ್ತಾಯಿಸಿದರು.
ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಜೆ.ಡಿ.ಎಸ್. ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಚಿವರಾದ ಆರ್.ಅಶೋಕ್, ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ, ಬಿ.ಶ್ರಿರಾಮುಲು, ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಆನಂದ್‌ಸಿAಗ್, ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಶಾಸಕರಾದ ಯು.ಟಿ. ಖಾದರ್, ಜೆ.ಡಿ.ಎಸ್.ಶಾಸಕಾಂಗ ಪಕ್ಷದ ನಾಯಕ ಭೋಜೇಗೌಡ, ಅಜಯ್ ಧರ್ಮ ಸಿಂಗ್, ಮಾಜಿ ಶಾಸಕ ವಿ.ಎಸ್. ಉಗ್ರಪ್ಪ, ರಾಜ್ಯದ ಹಲವು ಶಾಸಕ ಮಿತ್ರರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.