ಅ.15ರಂದು ದೊಡ್ಡೆರಿ ಗ್ರಾಮದಲ್ಲಿ
ಗ್ರಾಮ ವಾಸ್ತವ್ಯ : ತಹಶಿಲ್ದಾರ್ ಎನ್ ರಘುಮೂರ್ತಿ ಹೇಳಿಕೆ
ಚಳ್ಳಕೆರೆ : ತಾಲ್ಲೂಕಿನ ದೊಡ್ಡೆರಿ
ಗ್ರಾಮದಲ್ಲಿ ಇದೇ ಅಕ್ಟೋಬರ್ 15ರಂದು ತಹಶಿಲ್ದಾರ್ ಎನ್.ರಘುಮೂರ್ತಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಹೂಡಿ
ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.
ಆದ್ದರಿಂದ ತಾಲ್ಲೂಕು ಮಟ್ಟದ ಅಧಿಕಾರಿಗಳು ಅಕ್ಟೋಬರ್ 15ರಂದು
ಚಳ್ಳಕೆರೆ ತಾಲ್ಲೂಕಿನ ದೊಡೇರಿ, ಗ್ರಾಮದಲ್ಲಿ ಗ್ರಾಮವಾಸ್ತವ್ಯದಲ್ಲಿ ಪಾಲ್ಗೊಂಡು,
ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು
ಕಂದಾಯ ನಿರೀಕ್ಷ ಲಿಂಗೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.