ವಾಲ್ಮೀಕಿ ಇಡೀ ಮನುಕುಲಕ್ಕೆ
ಶ್ರೇಷ್ಠ ದಾರ್ಶನಿಕರು ಪಿಎನ್.ಮುತ್ತಯ್ಯ ಹೇಳಿಕೆ

ಚಳ್ಳಕೆರೆ : ಮಹರ್ಷಿ ವಾಲ್ಮೀಕಿ ಕೇವಲ ಒಂದು ಜಾತಿಗೆ ಸೀಮಿತವಲ್ಲ ಸರ್ವರಿಗೂ ಸಮಾನತೆ ತತ್ ಸಾರಿದ ಮಹಾತ್ಮರು ಎಂದು ಪಿಎನ್.ಮುತ್ತಯ್ಯ ಹೇಳಿದ್ದಾರೆ.
ಅವರು ನಾಯಕನಹಟ್ಟಿ ಹೋಬಳಿಯ ನಲಗೇತನಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡ ಅದ್ದೂರಿ ವಾಲ್ಮೀಕಿ ಜಯಂತೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು

ಇನ್ನೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಹಾಗೂ ಯುವ ನಾಯಕ ಪಿಎನ್.ಮುತ್ತಯ್ಯ ಮಾತನಾಡಿ ಮಹರ್ಷಿ ವಾಲ್ಮೀಕಿ ರಾಮಾಯಣದಂತಹ ಮಹಾಕಾವ್ಯವನ್ನು ರಚಿಸಿದ್ದಾರೆ ಮಹರ್ಷಿ ವಾಲ್ಮೀಕಿರವರ ಆದರ್ಶಗಳನ್ನು ಜೀವನದಲ್ಲಿ ಯುವ ಪೀಳಿಗೆ ಅಳವಡಿಸಿಕೊಂಡಾಗ ವಾಲ್ಮೀಕಿ ಜಯಂತೋತ್ಸವ ಆಚರಣೆಗೆ ಅರ್ಥ ಬರುತ್ತದೆ ಮಹನೀಯರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಯುವಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ಮುಂದಾಗಬೇಕು ಎಂದು ತಿಳಿಸಿದರು.
ಜಯಂತಿಯಲ್ಲಿ ವಾಲ್ಮೀಕಿ ಭಾವಚಿತ್ರವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು, ಗ್ರಾಮಸ್ಥರು ಸೇರಿ ವಾಲ್ಮೀಕಿ ಭಾವಚಿತ್ರಕ್ಕೆ ಭಕ್ತಿ ಪೂರ್ವಕ ಪೂಜೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಊರಿನ ಮುಖಂಡರಾದ ಪಿಎಂ.ಪೂರ್ಣ ಓಬಯ್ಯ, ಎಸ್‌ಜಿ.ಸಣ್ಣಬೋರಯ್ಯ, ಜಿಸಿ.ಬೋರಯ್ಯ, ಗ್ರಾಮ ಪಂಚಾಯತಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಊರಿನ ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು

About The Author

Namma Challakere Local News
error: Content is protected !!