ದೆಹಲಿಯಲ್ಲಿ ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಶುಭಾ ಕೋರಿದ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಭೇಟಿಯಾಗಿ ಶುಭಹಾರೈಸಿದರು.
ದೆಹಲಿಯಲ್ಲಿ ಖರ್ಗೆ ಅವರನ್ನು ಭೇಟಿಯಾಗಿ ಶುಭಹಾರೈಸಿದ, ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ರವರು, ನಿಮ್ಮ ಸಾರಥ್ಯದಲ್ಲಿ ಪಕ್ಷ ಮತ್ತಷ್ಟು ಬಲಿಷ್ಠಗೊಂಡು, ಮತ್ತೊಮ್ಮೆ ಅಧಿಕಾರಕ್ಕೆ ಬರುವಂತಾಗಲಿ.
ನಿಮ್ಮ ಅನುಭವ ನಮ್ಮೆಲ್ಲರಿಗೂ ಮಾರ್ಗದರ್ಶನ ದೊರೆಯುವುದರ ಜೊತೆಯಲ್ಲಿ ನಿಮ್ಮ ಮಾರ್ಗದರ್ಶನದಲ್ಲಿ ಪಕ್ಷವನ್ನು ಬಲಗೊಳ್ಳಿಸಲು ಎಲ್ಲರೂ ಒಟ್ಟಾಗಿ ದುಡಿಯುವುದಾಗಿ ತಿಳಿಸಿದರು.
ಈ ವೇಳೆ ಮಾಜಿ ಸಚಿವ ಹೆಚ್.ಆಂಜನೇಯ, ಸತೀಶ್ ಜಾರಕಿಹೊಳಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮತ್ತಿತರರು ಉಪಸ್ಥಿತರಿದ್ದರು.