ಜಿಟಿಟಿಸಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ :
ಶಾಸಕ ಟಿ.ರಘುಮೂರ್ತಿಯನ್ನು
ಹಳ್ಳಿ ಸೊಗಡಿನ ಮೂಲಕ ಸ್ವಾಗತಿಸಿದ ವಿದ್ಯಾರ್ಥಿ ವೃಂಧ

ಚಳ್ಳಕೆರೆ : ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅದ್ದೂರಿಯಾಗಿ ಹಮ್ಮಿಕೊಂಡ ಕನ್ನಡ ರಾಜೋತ್ಸವ ಕಾರ್ಯಕ್ರಮಕ್ಕೆ ಕ್ಷೇತ್ರದ ಶಾಸಕ ಟಿ ರಘಮೂರ್ತಿ ಬಾಗಿಯಾಗಿ ಶುಭಾ ಕೊರಿದ್ದಾರೆ.
ವಿವಿಧ ಕಲಾ ತಂಡದೊAದಿಗೆ ಆತ್ಮೀಯವಾಗಿ ಬರಮಾಡಿಕೊಂಡ ಜಿಟಿಟಿಸಿ ವಿಧ್ಯಾರ್ಥಿ ಬಳಗ, ಹಳ್ಳಿ ಸೊಗಡು ಜನಪದ ಕೋಲಾಟದ ಮೂಲಕ ಶಾಸಕರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇನ್ನೂ ಚಳ್ಳಕೆರೆ ಶಾಸಕ ಟಿ.ರಘಮೂರ್ತಿ ರವರಿಂದ ಧ್ವಜರೋಹಣ ಹಾಗೂ ಕನ್ನಡಾಂಬೆಗೆ ಪುಷ್ಪಾರ್ಚನೆ ನಮನ ಸಲ್ಲಿಸಿ ನಂತರ ಮಾತನಾಡಿದ ಅವರು
ಚಳ್ಳಕೆರೆ ನಗರದಲ್ಲಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಟಿ.ರಘುಮೂರ್ತಿ ವಿದ್ಯಾರ್ಥಿಗಳು ಈ ದೇಶದ ಶಕ್ತಿ. ಕ್ಷೇತ್ರದ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯ ಹಿತದೃಷ್ಟಿಯಿಂದ ಕ್ಷೇತ್ರದಲ್ಲಿ ಶೈಕ್ಷಣಿಕ ಕೇಂದ್ರಗಳನ್ನು ತರಲಾಗಿದೆ. ಈ ಅವಕಾಶಗಳನ್ನು ಮಕ್ಕಳು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು.
ದೇಶಕ್ಕೆ ಉತ್ತಮ ಪ್ರಜೆಯಾಗಿ, ಹೆತ್ತವರಿಗೆ ಉತ್ತಮ ಮಕ್ಕಳಾಗಿ ಉತ್ತಮ ಸಾಧನೆ ಮಾಡುವುದರ ಜೊತೆಯಲ್ಲಿ, ಉನ್ನತ ಸ್ಥಾನದಲ್ಲಿ ಉದ್ಯೋಗ ಪಡೆದು, ಪಾಲಕರನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳುವಂತ ಕೆಲಸ ತಮ್ಮಿಂದ ಹಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಇನ್ನು ಜಿಟಿಟಿಸಿ ಕೇಂದ್ರದ ಪ್ರಯೋಗಾಲಯಕ್ಕೆ ಭೇಟಿ ನೀಡಿದ ಶಾಸಕರು, ವಿದ್ಯಾರ್ಥಿಗಳು ತಯಾರಿಸಿದ ವಿವಿಧ ತಾಂತ್ರಿಕ ವಿನ್ಯಾಸಗಳನ್ನು ಪರಿಶೀಲಿಸಿದ ವಿದ್ಯಾರ್ಥಿ ಮಿತ್ರರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷೆ ಸುಮಕ್ಕ, ನಗರಸಭಾ ಸದಸ್ಯ ರಮೇಶ್ ಗೌಡ, ರಾಘವೇಂದ್ರ , ಮಾಜಿ ನಗರಸಭಾ ಸದಸ್ಯರು ಮತ್ತು ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷರಾದ ಪ್ರಸನ್ನ ಕುಮಾರ್, ಮಾಜಿ ತಾಲೂಕ ಪಂಚಾಯತಿ ಸದಸ್ಯರಾದ ಎಚ್.ಆಂಜನೇಯ , ಮುಖಂಡರಾದ ದೊಡ್ಡರಂಗಪ್ಪ ಜಿಟಿಟಿಸಿ ಕೇಂದ್ರದ ಪ್ರಾಂಶುಪಾಲರು, ಶಿಕ್ಷಕ ವೃಂದ ವಿದ್ಯಾರ್ಥಿ ಮಿತ್ರರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!