ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಇಡೀ ಕ್ಷೇತ್ರದ ತುಂಬೆಲ್ಲ ಪುಲ್ ರೌಂಡ್ಸ್
ಚಳ್ಳಕೆರೆ : ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಇಡೀ ಕ್ಷೇತ್ರದ ತುಂಬೆಲ್ಲ ಪುಲ್ ರೌಂಡ್ಸ್ ಹೊಡೆದಿದ್ದಾರೆ ಅದರಂತೆ ನವೆಂಬರ್ 11 ರಂದು ಕ್ಷೇತ್ರದ ತುರುವನೂರು ಹೋಬಳಿಯ ಬೆಳಗಟ್ಟ ಗ್ರಾಮದಲ್ಲಿ ನಡೆದ ಶ್ರೀ ದುರ್ಗಾಂಬಿಕ ದೇವಿಯ ದೇವಸ್ಥಾನದ ಪ್ರತಿಷ್ಠಾಪನೆ ಮತ್ತು ಕಳಸರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ದೇವಿ ಕೃಪೆಗೆ ಪಾತ್ರರಾಗಿದ್ದಾರೆ.
ಇನ್ನೂ ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿಯ ಹುಣಸೆಕಟ್ಟೆ ಗ್ರಾಮದಲ್ಲಿ ದಲಿತ ಸಮುದಾಯದ ಯುವಕರು ಹಮ್ಮಿಕೊಂಡ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಹಾಗೂ ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿಯ ಸುಲ್ತಾನಿಪುರ ಗ್ರಾಮದಲ್ಲಿ ನಡೆದ ಶ್ರೀ ಮಾರಿಕಾಂಬ ದೇವಿಯ ದೇವಸ್ಥಾನದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ.
ಈಗೇ ಈಡೀ ದಿನವೆಲ್ಲ ಕ್ಷೇತ್ರದಲ್ಲಿ ಮೊಕ್ಕಂ ಹೂಡಿ ಸಾರ್ವಜನಿಕರ ಕುಂದು ಕೊರತೆಗಳ ಜೊತೆಗೆ ವಿವಿಧ ಧಾರ್ಮಿಕ ಕೇಂದ್ರಗಳ ದೇವಾಸ್ಥಾನಗಳ ಪೂಜೆ ಸಲ್ಲಿಸಿ ಜನರೊಟ್ಟಿಗೆ ಬಾಗಿಯಾಗಿದ್ದರು.