ಕ್ಷೇತ್ರ ವಿಕ್ಷಣೆಯಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸಿದ :
ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಗ್ರಾಮದ ಹಲವಾರು ಸಮಸ್ಯೆಗಳನ್ನು ಕಳೆದ ಹತ್ತು ವರ್ಷಗಳಿಂದ ಪೂರ್ಣಗೊಳಿಸಿದ್ದೆನೆ ಇನ್ನೂ ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಸಮಸ್ಯೆ ಇತ್ಯಾರ್ಥಗೊಳಿಸಲಾಗುವುದು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.
ಅವರು ತಾಲೂಕಿನ ತುರುವನೂರು ಗ್ರಾಮದಲ್ಲಿ ಸಾರ್ವಜನಿಕರೊಟ್ಟಿಗೆ ಅವಾಲನ್ನು ಸ್ವೀಕರಿಸಿ ನಂತರ ಮಾತನಾಡಿದ ಅವರು, ಕಳೆದ ನನ್ನ ಶಾಸಕ ಅವಧಿಯಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೆನೆ ಮುಂದೆಯೂ ಸಹ ಅಭಿವೃದ್ದಿ ಪಥದತ್ತ ಗ್ರಾಮವನ್ನು ಕೊಂಡುಯ್ಯುತ್ತೆನೆ ಎಂದು ಭರವಸೆ ನೀಡಿದರು.
ಇದೇ ಸಂಧರ್ಭದಲ್ಲಿ ತುರುವನೂರು ಪಂಚಾಯತಿ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿದರು. ಗ್ರಾಮಸ್ಥರಿಂದ ಸಮಸ್ಯೆಗಳ್ನು ಆಲಿಸಿದ ಶಾಸಕರು, ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ತುರುವನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಂಗಾರಕ್ಕನಹಳ್ಳಿ, ಅವಳೇನಹಳ್ಳಿ, ಬೊಗಳೆರ ಹಟ್ಟಿ ಮತ್ತು ತುರುವನೂರು ಗ್ರಾಮಗಳಲ್ಲಿ ಕುಂದುಕೊರತೆ ಆಲಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಸವರಾಜ್, ಉಪಾಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ರೆಡ್ಡಿ, ಸ್ಥಳೀಯರ ಮುಖಂಡರು, ಗ್ರಾಮದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!