ಕನ್ನಡ ಉಳಿವಿಗೆ ಪ್ರತಿಯೊಬ್ಬರೂ ಕಂಕಣಭದ್ಧರಾಗಬೇಕು ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಟಿ. ಲೀಲಾವತಿ
ನಾಯಕನಹಟ್ಟಿ:: ಕನ್ನಡ ನಾಡು ಉಳಿವಿಗೆ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಟಿ.ಲೀಲಾವತಿ ಹೇಳಿದ್ದಾರೆ.
ಅವರು ಗುರುವಾರ ಪಟ್ಟಣದ ಹಟ್ಟಿ ಮಲ್ಲಪ್ಪ ನಾಯಕ ವೃತ್ತದಲ್ಲಿ ನಾಯಕನಹಟ್ಟಿ ಹೋಬಳಿಯ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ನಾಯಕನಹಟ್ಟಿ ಹೋಬಳಿ ಕನ್ನಡಪರ ಸಂಘಟನೆಗಳ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸುವುದರ ಮೂಲಕ ಉದ್ಘಾಟಿಸಿ ಚಾಲನೆ ನೀಡಿ ಮಾತನಾಡಿದ್ದಾರೆ ಎಷ್ಟು ಶತಮಾನಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಿ ಅನ್ಯ ಭಾಷೆಯನ್ನು ಕಲಿಯಬೇಕೆಂದು ಪರಕೀಯರು ತಮ್ಮ ವ್ಯಾಪಾರ ಅಭಿವೃದ್ಧಿಗಾಗಿ ಅಖಂಡ ಭಾರತವನ್ನು ಅರಿದು ಹಂಚಿ ಹಲವಾರು ಪ್ರಾಂತ್ಯಗಳನ್ನಾಗಿ ಮಾಡಿಕೊಂಡು ತಮ್ಮ ದೇಶದ ಸಂಪತ್ತನ್ನು ಕೊಳ್ಳೆ ಹೊಡೆದರು ಇದನ್ನು ಮನಗಂಡ ನಮ್ಮ ಸಾಹಿತಿಗಳು ಚಿಂತಕರು ಚಳುವಳಿಯ ಮೂಲಕ ಕನ್ನಡ ಭಾಷೆ ನೋಡುವ ಪ್ರದೇಶವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಲು ಸಾಧ್ಯವಾಯಿತು ಎಂದು ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಟಿ. ಲೀಲಾವತಿ ತಿಳಿಸಿದರು
ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಕೆ ಎಂ ಶಿವಸ್ವಾಮಿ ಮಾತನಾಡಿ ಕನ್ನಡ ರಾಜ್ಯೋತ್ಸವ ಕನ್ನಡ ನಾಡು ನುಡಿಯ ಸಂಸ್ಕೃತಿಯ ಪ್ರತ್ಯೇಕವಾದಂತಹ ಹಬ್ಬವಾಗಿದೆ ಪ್ರತಿಯೊಬ್ಬರೂ ಕನ್ನಡವನ್ನ ಉಳಿಸಿ ಬೆಳೆಸಲು ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಂತರ ಪಟ್ಟಣ ಪಂಚಾಯತಿ ಸದಸ್ಯ ಸೈಯದ್ ಅನ್ವರ್ ಮಾತನಾಡಿ ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಕನ್ನಡವನ್ನ ಉಳಿಸಿ ಬೆಳೆಸುವಲ್ಲಿ ಯುವಕರು ಮುಂದಾಗಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಸೈಯದ್ ಅನ್ವರ್ ತಿಳಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ , ವಿ ವಿನುತಾ, ತಿಪ್ಪೇಸ್ವಾಮಿ, ಓಬಯ್ಯ ದಾಸ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಬಿ ಎಂ ತಿಪ್ಪೇಸ್ವಾಮಿ, ನಾರಾಯಣ ನಾಯ್ಕ, ಕಾಕಸೂರಯ್ಯ, ಮನ್ಸೂರ್, ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿಯ ನೂತನ ಅಧ್ಯಕ್ಷ ಬಿ ಕಾಟಯ್ಯ ಮಲ್ಲೂರಹಳ್ಳಿ, ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಉಪಾಧ್ಯಕ್ಷ ಟಿ ಬಸಪ್ಪ ನಾಯಕ, ಪತ್ರಕರ್ತ ವಿ ಧನುಜಯ, ಹಟ್ಟಿ ಮಲ್ಲಪ್ಪ ನಾಯಕ ಸಂಘದ ಕಾರ್ಯದರ್ಶಿ ಜಿ ವೈ ತಿಪ್ಪೇಸ್ವಾಮಿ ನಲಗೇತನಹಟ್ಟಿ, ಸರ್ಕಾರಿ ಮಾದರಿ ಶಾಲೆಯ ಶಿಕ್ಷಕರು ವಿದ್ಯವಿಕಾಸ ಶಾಲೆಯ ಶಿಕ್ಷಕ ಶಿಕ್ಷಕಿಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು