ಟೈಕೊಂಡ ಕ್ರೀಡೆಗೆ ಬಯಲು ಸೀಮೆ ಯುವಕರ ಉತ್ಸವ
ಚಳ್ಳಕೆರೆ : ನಗರದ ಕೋಟೆ ಬೋರಮ್ಮ ಪ್ರಥಮ ದರ್ಜೆ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ಸಂಘದ ಸಂಯುಕ್ತ ಆಶ್ರಯದಲ್ಲಿ ಪುರುಷ ಮತ್ತು ಮಹಿಳೆಯರ ಟೈಕೊಂಡ ಕ್ರೀಡೆಯ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು.
ಈ ಸಮಾರಂಭದ ಉದ್ಘಾಟನೆಯನ್ನು ಡಾ. ಜಿಎಸ್.ಕೋಟೆ ಬೋರಮ್ಮ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯರಾದ ತಿಪ್ಪೇಸ್ವಾಮಿ ಉದ್ಘಾಟಿಸಿ ಮಾತನಾಡಿದರು,
ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುದು ಮುಖ್ಯ ಸೋಲು ಮತ್ತು ಗೆಲುವು ಒಂದೇ ನಾಣ್ಯದ ಎರಡು ಮುಖ ಇದ್ದಹಾಗೆ ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ವಿಶ್ವವಿದ್ಯಾನಿಲಯದ ತಂಡಕ್ಕೆ ಆಯ್ಕೆಯಾಗಿ ವಿಶ್ವವಿದ್ಯಾನಿಲಯಕ್ಕೆ ಉತ್ತಮ ಹೆಸರು ತರಬೇಕೆಂದು ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಹಿರಿಯ ಪ್ರಾಧ್ಯಾಪಕ ನಿರ್ದೇಶಕರಾದ ಮಕಸೂದ್ ಅಹ್ಮದ್ ಸಾಧಿಕ್ , ನಾಗರಾಜ್, ದೈಹಿಕ ಶಿಕ್ಷಣ ನಿರ್ದೇಶಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು
ಕಾರ್ಯಕ್ರಮದ ಪ್ರಸ್ತಾವಿಕ ನುಡಿಗಳನ್ನು ಡಾ.ಟಿ.ಗಂಗಾಧರ, ದೈಹಿಕ ಶಿಕ್ಷಣ ನಿರ್ದೇಶಕರು ಇವರು ಪ್ರಾಥಮಿಕ ನುಡಿಯನ್ನು ಮಾಡಿದರು ಸ್ವಾಗತವನ್ನು ಡಾ.ಧನಂಜಯ್ ಅವರು ನಿರ್ವಹಿಸಿದರು
ಈ ಕಾರ್ಯಕ್ರಮದಲ್ಲಿ ಆಯ್ಕೆ ತಂಡದ ಪ್ರಸನ್ನ ಕುಮಾರ್ ಹಾಗೂ ಹರೀಶ್, ಮಂಜುನಾಥ್, ಶ್ರೀಧರ ರವರು ಟೈಕೊಂಡ ಕ್ರೀಡೆಗೆ ಸುಮಾರು ದಾವಣಗೆರೆ ವಿಶ್ವವಿದ್ಯಾಲಯದ ಬರುವ ಕಾಲೇಜುಗಳು ಮತ್ತು ಚಿತ್ರದುರ್ಗದ ಕಾಲೇಜುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೆಚ್ಚಿನ ಪುರುಷ ಮತ್ತು ಮಹಿಳೆಯರು ಟೈಕೊಂಡ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸುವುದರ ಮೂಲಕ ಕೈಕೊಂಡ ಆಯ್ಕೆಯ ಪ್ರಕ್ರಿಯೆ ಯಶಸ್ವಿಗೊಳಿಸಲಾಯಿತು

About The Author

Namma Challakere Local News
error: Content is protected !!