ಚಿತ್ರದುರ್ಗ ಜಿಲ್ಲೆಯಲ್ಲಿಯೇ ಮೊದಲ ಈ ವೇಸ್ಟ್ ಸಂಗ್ರಹ ಕೇಂದ್ರ ಚಳ್ಳಕೆರೆಯಲ್ಲಿ
ಚಳ್ಳಕೆರೆ : ನಗರದ ಎಸ್ ಆರ್ ಎಸ್ ಹೆರಿಟೇಜ್ ಶಾಲೆಯಲ್ಲಿ ತ್ಯಾಜ್ಯ ವಸ್ತುಗಳ ಬಗೆಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 2020-21 ರಿಂದ ಎಲೆಕ್ಟ್ರಾನಿಕ್ ತ್ಯಾಜ್ಯಗಳನ್ನು ಸಂಗ್ರಹಿಸಲಾಗುತ್ತಿದೆ.
ಚಳ್ಳಕೆರೆ ನಗರ ಸಭೆಯಲ್ಲಿ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ನರೇಂದ್ರ ಬಾಬು ಅವರು ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳಿಗೆ ತ್ಯಾಜ್ಯ ವಿಲೇವಾರಿ ಬಗೆಗೆ ಮಾಹಿತಿ ನೀಡಿದರು.
ಎಸ್ ಆರ್ ಎಸ್ ಹೆರಿಟೇಜ್ ಶಾಲೆಯಲ್ಲಿ ಇಂದು ನಗರ ಸಭೆಯ ಸಹಯೋಗದೊಂದಿಗೆ ಚಿತ್ರದುರ್ಗ ಜಿಲ್ಲೆಯಲ್ಲಿಯೇ ಮೊದಲ ಈ ವೇಸ್ಟ್ ಸಂಗ್ರಹ ಕೇಂದ್ರವನ್ನು ತೆರೆಯಲಾಯಿತು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ವಿಜಯ ಬಿ.ಎಸ್, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.