ಚಳ್ಳಕೆರೆ : ಸಾಮಾಜಿಕ ಭದ್ರತಾ ಪಿಂಚಣಿ ಮತ್ತು ಬೆಳೆ ನಷ್ಟ ಪರಿಹಾರಕ್ಕೆ ಸಂಬAಧಿಸಿದAತೆ ಸರ್ಕಾರದಿಂದ ಬಿಡುಗಡೆಯಾಗುವಂತ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಳ್ಳಬಾರದು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದ್ದಾರೆ.
ಅವರು ತಾಲೂಕಿನ ಪರುಶುರಾಂಪುರ ಹೋಬಳಿಯ ಜಾಜೂರು ಪ್ರಗತಿ ಗ್ರಾಮೀಣ ಬ್ಯಾಂಕ್‌ಗೆ ಸಾರ್ವಜನಿಕರ ಮನವಿ ಮೇರೆಗೆ ಭೇಟಿನೀಡಿ ನಂತರ ಅಧಿಕಾರಿಗಳ ಜೊತೆಗೆ ಚರ್ಚಿಸಿ ಮಾತನಾಡಿದ ಅವರು, ಪ್ರತಿದಿನ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರು ಸರ್ಕಾರದಿಂದ ಈ ರೀತಿ ಬಿಡುಗಡೆಯಾದ ಜೀವನ ನಿರ್ವಹಣೆಗೆ ಇರುವಂತಹ ಈ ಹಣವನ್ನು ಬ್ಯಾಂಕಿನ ಸಾಲಕ್ಕೆ ಜಮಾ ಮಾಡಿಕೊಳ್ಳಬಾರದು ಇದರಿಂದ ಜೀವನ ನಿರ್ವಹಣೆಗೆ ತುಂಬಾ ಕಷ್ಟವಾಗುತ್ತದೆ ಎಂದರು.
ರೈತರು ತಮ್ಮ ಬದುಕಿಗೆ ಈ ಹಣ ಆಶ್ರಯವಾಗುತ್ತದೆ ಬ್ಯಾಂಕಿನ ಸಿಬ್ಬಂದಿಗಳು ಇದನ್ನು ಗಮನಿಸಿ ರೈತರುಗಳಿಗೆ ಆತ್ಮಸ್ಥೈರ್ಯ ತುಂಬಬೇಕು ರೈತರುಗಳು ಕೂಡ ಬ್ಯಾಂಕ್ ನೊಂದಿಗೆ ಉತ್ತಮವಾದ ವ್ಯವಹಾರ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಗ್ರಾಮದ ವೈದ್ಯಾಧಿಕಾರಿಡಾ.ಬಸವರಾಜು, ಪ್ರಗತಿ ಗ್ರಾಮೀಣ ಬ್ಯಾಂಕಿನ ಪ್ರಬಂಧಕರಾದ ವಿಜಯಭಾಸ್ಕರ, ಮುಖಂಡರಾದ ಹೊನ್ನೂರ್ ಗೋವಿಂದಪ್ಪ, ಗ್ರಾಮ ಲೆಕ್ಕಾಧಿಕಾರಿ ಉಮೇಶ್ ಮತ್ತಿತರು ಉಪಸ್ಥಿತರಿದ್ದರು