ಚಳ್ಳಕೆರೆ : ರಸ್ತೆ ಬದಿಯಲ್ಲಿ ನಿಂತು ಹಣ ವಸೂಲಿ ಮಾಡುತ್ತಿದ್ದ ಮಂಗಳ ಮುಖಿಗೆ ಅನಾಮದೇಯ ವಾಹನಹೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ತಾಲೂಕಿನ ಹೊಟ್ಟಪ್ಪನಹಳ್ಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ನಗರದ ಕಾಟಪ್ಪನಹಟ್ಟಿಯ ಮಂಗಳಮುಖಿ ಮಂಜು(30) ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಶುಕ್ರವಾರ ರಾತ್ರಿ ಸಮಯದಲ್ಲಿ ರಸ್ತೆ ಬದಿಯಲ್ಲಿ ನಿಂತು ಹಣ ವಸೂಲಿ ಮಾಡುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಪಿಎಸ್ ಸತೀಶ್‌ನಾಯ್ಕ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ ಎನ್ನಲಾಗಿದೆ.